ಮಿತ್ತಬೈಲು ಮಸೀದಿ ಧರ್ಮ ಗುರುಗಳಿಗೆ ಹತ್ಯೆಯ ಬೆದರಿಕೆ: ಆರೋಪಿ ವಶ
Team Udayavani, Mar 2, 2022, 9:45 AM IST
ಬಂಟ್ವಾಳ: ಮಸೀದಿಯ ಒಳಗೆ ನುಗ್ಗಿದ ವ್ಯಕ್ತಿಯೋರ್ವ ಮಸೀದಿಯ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಬಳಿಕ ಆತ ಪೊಲೀಸ್ ವಶವಾದ ಘಟನೆ ಮಂಗಳವಾರ ತಡರಾತ್ರಿ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ.
ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಆತ ರಾತ್ರಿ ಮಸೀದಿಯ ಬಳಿ ದ್ವಿಚಕ್ರ ವಾಹನವನ್ನಿಟ್ಟು ಅಕ್ರಮವಾಗಿ ಮಸೀದಿಯೊಳಗೆ ನುಗ್ಗಿದ್ದಾನೆ. ಈ ವೇಳೆ ಮಸೀದಿಯ ಗುರುಗಳು ಆತನನ್ನು ವಿಚಾರಿಸಿದಾಗ, ನಾನು ಮಸೀದಿಯ ಗುರುಗಳನ್ನು ಹತ್ಯೆ ಮಾಡಲು ಬಂದಿದ್ದು, ಹತ್ಯೆ ಮಾಡುತ್ತೇನೆ, ನನ್ನನ್ನು ನೀವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ.
ಇದನ್ನೂ ಓದಿ:ಬೈಕ್ ಮುಖಾಮುಖಿ: ಓರ್ವನ ಸಾವು, ಇಬ್ಬರು ಗಂಭೀರ
ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಚಾಕು ಪತ್ತೆಯಾಗಿದೆ. ಬಳಿಕ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಸೀದಿಗೆ ರಕ್ಷಣೆ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.