ಪ್ರಭಾರ ನೆಲೆಯಲ್ಲಿ ಬೇರೆ ಅಂಗನವಾಡಿ ಕಾರ್ಯಕರ್ತೆಯ ನಿಯೋಜನೆ
Team Udayavani, Jul 12, 2018, 12:44 PM IST
ಬೆಳ್ತಂಗಡಿ : ಮಿತ್ತಬಾಗಿಲು ಕೊಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡಬೇಕು ಎಂಬ ಹೆತ್ತವರ ಆಗ್ರಹದ ಹಿನ್ನೆಲೆಯಲ್ಲಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರು ಕೇಂದ್ರದಲ್ಲಿ ಬುಧವಾರ ಹೆತ್ತವರ ಸಭೆ ನಡೆಸಿ, ಬೇರೊಂದು ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನು ಪ್ರಭಾರ ನೆಲೆಯಲ್ಲಿ ಕೊಲ್ಲಿ ಅಂಗನವಾಡಿಗೆ ನಿಯೋಜಿಸಿದ್ದಾರೆ.
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಹಿಂಸೆ ನೀಡುವ ಜತೆಗೆ ಪೌಷ್ಠಿಕ ಆಹಾರಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿರುವ ಹೆತ್ತವರು ಕಾರ್ಯಕರ್ತೆಯ ವರ್ಗಾವಣೆಗೆ ಆಗ್ರಹಿಸಿ ಜು. 10ರಂದು ಏಕಾಏಕಿ ಪ್ರತಿಭಟನೆ ನಡೆಸಿದ್ದರು. ಜತೆಗೆ ವರ್ಗಾವಣೆ ಆದೇಶ ಬರುವವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು.
ಹೀಗಾಗಿ ತಹಶೀಲ್ದಾರ್ ಮದನ್ ಮೋಹನ್ ಅವರು ಸ್ಥಳಕ್ಕೆ ಭೇಟಿ ಹೆತ್ತವರನ್ನು ಸಮಾಧಾನಿಸಿ, ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಸಿಡಿಪಿಒ ಅವರಿಗೆ ಸೂಚನೆ ನೀಡಿದ್ದರು. ಜತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಜತೆಗೂ ಮಾತುಕತೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಪೂರ್ವ ನಿಗದಿಯಂತೆ ಹೆತ್ತವರ ಸಭೆ ನಡೆಸಿದ ಸಿಡಿಪಿಒ ಪ್ರಿಯಾ ಅವರು ಹೆತ್ತವರ ಅಭಿಪ್ರಾಯ ಪಡೆದು ಬೇರೊಂದು ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನು ಈ ಅಂಗನವಾಡಿ ಕೇಂದ್ರಕ್ಕೆ ಪ್ರಭಾರ ನೆಲೆಯಲ್ಲಿ ವಾರಕ್ಕೆ ಮೂರು ದಿನ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಉಳಿದಂತೆ ಸ್ಥಳೀಯ ಸಹಾಯಕಿ ಕೆಲಸ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.