ನೆರವು ಕಡಿತ: ಕಲ್ಲಡ್ಕ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, Aug 13, 2017, 7:10 AM IST
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಕಳೆದ ಹತ್ತು ವರ್ಷಗಳಿಂದ ಶ್ರೀ ಕ್ಷೇತ್ರ ಕೊಲ್ಲೂರಿನಿಂದ ದತ್ತು ಯೋಜನೆಯಡಿ ನೀಡುತ್ತಿದ್ದ ಅನ್ನದಾನದ ಅನುದಾನವನ್ನು ರಾಜ್ಯ ಸರಕಾರ ರದ್ದುಗೊಳಿಸಿರು ವುದನ್ನು ವಿರೋಧಿಸಿ ಶಾಲೆಯ ಮಕ್ಕಳು ಮತ್ತು ಹೆತ್ತವರು ಶುಕ್ರವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ಮಾಡಿದರು.
ಮೂವರು ಪೋಷಕರು, ಹದಿನಾಲ್ಕು ವಿದ್ಯಾರ್ಥಿಗಳು ಮಾತನಾಡಿ, ಉಸ್ತುವಾರಿ ಸಚಿವರೇ ನಿಮ್ಮ ರಾಜಕೀಯ ದ್ವೇಷಕ್ಕಾಗಿ ನಮ್ಮ ಹೊಟ್ಟೆಯ ಹಸಿವಿಗೆ ನೀಡುವ ಅನ್ನದಾನಕ್ಕೆ ಯಾಕೆ ಅಡ್ಡಿಪಡಿಸಿದಿರಿ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಬಂದ ಅನಂತರವೂ ನಾಲ್ಕೂವರೆ ವರ್ಷ ನಿರಂತರ ಸಹಾಯ ದೊರೆತಿದೆ. ಜಿಲ್ಲೆಯಲ್ಲಿ ಕೆಲವು ಸಮಯದ ಹಿಂದೆ ನಡೆದ ಅಹಿತಕರ ಘಟನೆಯ ಬಳಿಕ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಅನ್ನದಾನಕ್ಕೆ ಕಲ್ಲು ಹಾಕಲಾಗಿದೆ ಎಂದು ಆರೋಪಿಸಿದರು.
ಸುಮಾರು ಮೂರು ಸಹಸ್ರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು 2 ಗಂಟೆಗಳಷ್ಟು ಕಾಲ ಪ್ರತಿಭಟನೆ ನಡೆಸಿದರು. ಬಟ್ಟಲು ಬಡಿದು ಪ್ರತಿಭಟನೆ ಪ್ರತಿಭಟನೆ ಸಂದರ್ಭ ಅನ್ನದ ಬಟ್ಟಲನ್ನು ಬಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮಗಳನ್ನು ಖಂಡಿಸಿದರು. ಶಿಸ್ತು ಬದ್ದವಾಗಿ ವಿದ್ಯಾರ್ಥಿಗಳು, ಹೆತ್ತವರು ಸಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಿ ದರು. ಪ್ರತಿಭಟನೆ ಸಂದರ್ಭ ಕುಳಿತು ಕೊಳ್ಳಲು ಹಾಕಿದ ಕಾಗದವನ್ನು ಅವರೇ ತೆಗೆದುಕೊಂಡು ಹೋಗಿ ಸ್ವಚ್ಚತೆಗೆ ಆದ್ಯತೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.