ದೌರ್ಜನ್ಯ, ಹಗರಣ: ಕುಂಬಳೆ ಸಿಐ ಕಚೇರಿಗೆ ಮುತ್ತಿಗೆ
Team Udayavani, Jul 26, 2019, 5:57 AM IST
ಕುಂಬಳೆ: ತಿರುವನಂತಪುರ ಸೆಕ್ರಟರಿಯೇಟ್ ಧರಣಿ ನಿರತ ಯುವಕಾಂಗ್ರೆಸ್ ಕಾರ್ಯಕರ್ತರ ಮೇಲಿನ ದೌರ್ಜನ್ಯ ಹಾಗೂ ಪಿ.ಎಸ್. ಸಿ. ಅಂಕಪಟ್ಟಿಯಲ್ಲಿನ ಅವ್ಯವಹಾರ ಖಂಡಿಸಿ ಮಂಜೇಶ್ವರ ಬ್ಲಾಕ್ ಯೂತ್ ಕಾಂಗ್ರೆಸ್ ಸಮಿತಿ ನೇತƒತ್ವದಲ್ಲಿ ಕುಂಬಳೆ ಸಿಐ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಬ್ಲಾಕ್ ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಸರ್ ಮೊಗ್ರಾಲ್ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನ ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ಉದ್ಘಾಟಿಸಿ ಮಾತನಾಡಿ, ರಾಜ್ಯದ ಆಡಳಿತಾರೂಢ ಸಿಪಿಎಂ ನೇತƒತ್ವದಲ್ಲಿ ಹಿಂಸೆ, ಕೊಲೆ, ಆತ್ಮಹತ್ಯೆ, ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಪಿಣರಾಯಿ ವಿಜಯನ್ ನೇತƒತ್ವದ ಎಡರಂಗ ಸರಕಾರದ ದುರಾಡಳಿತದಿಂದ ಜನ ಸಾಮಾನ್ಯರು ಕಂಗೆಟ್ಟಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ನಡೆಸುವ ಯೂತ್ ಕಾಂಗ್ರೆಸ್ ಕಾರ್ಯ ಕರ್ತರ ಮೇಲೆ ಪೊಲೀಸ್ ದೌರ್ಜನ್ಯ ವೆಸಗಲಾಗುತ್ತಿದೆ ಯೆಂದು ಅವರು ಆರೋಪಿಸಿದರು.
ಕುಂಬಳೆ ಮಂಡಲ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಭಂಡಾರಿ, ನಾಯಕರಾದ ದಿವಾಕರ್ ಎಸ್.ಜೆ., ರವಿ ಪೂಜಾರಿ ಕೋಟೆಕ್ಕಾರ್, ಶಾನಿದ್ ಕಯ್ನಾಂ ಕೂಡೇಲು, ಲಕ್ಷ್ಮಣ ಪ್ರಭು ಕುಂಬ್ಳೆ, ಇಕ್ಬಾಲ್ ಕಳಿಯೂರು, ಇರ್ಷಾದ್ ಕಳಿಯೂರು, ನಾರಾಯಣ ಏದಾರು, ಶರೀಫ್ ಅರಿಬೆ„ಲು, ಸಲೀಂ ಕಟ್ಟತ್ತಡ್ಕ, ಆಬಿದ್ ಎಡಚೇರಿ, ಆರಿಫ್ ಮಚ್ಚಂಪಾಡಿ, ಡೋಲ್ಫಿ ಡಿ’ಸೋಜಾ, ಲೋಕನಾಥ ಶೆಟ್ಟಿ, ಯೂಸುಫ್ ಮಿಲಾನೊ ಮುಂತಾದವರು ಉಪಸ್ಥಿತರಿದ್ದರು.
ಶರೀಫ್ ಪಿ.ಕೆ.ನಗರ ಸ್ವಾಗತಿಸಿದರು. ನಿಸಾರ್ ಆರಿಕ್ಕಾಡಿ ವಂದಿಸಿದರು. ಪ್ರತಿಭಟನೆಗೆ ಕಾರ್ಯಕರ್ತರು ಮೆರವಣಿಗೆಯಲ್ಲಿ ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.