ಬಂಟ್ವಾಳದಲ್ಲಿ ಬೃಹತ್‌ ಪ್ರತಿಭಟನೆ;ಸಂಸದೆ ಶೋಭಾ ಸೇರಿ ಹಲವರು ವಶಕ್ಕೆ

Team Udayavani, Jul 7, 2017, 11:30 AM IST

13.jpg

ಬಂಟ್ವಾಳ: ಬಿ.ಸಿ. ರೋಡ್‌ನ‌ಲ್ಲಿ ಜು. 4ರ ರಾತ್ರಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಅವರ  ಮೇಲೆ ಮರಣಾಂತಿಕ ಹಲ್ಲೆ ಪ್ರಕರಣ ಖಂಡಿಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಬಿ.ಸಿ.ರೋಡ್‌ನ‌ಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. 

ನಿಷೇಧಾಜ್ಞೆಯ ನಡುವೆಯೂ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 
ಸಂಸದ ನಳಿನ್‌ ಕುಮಾರ್‌ ಕಟೀಲ್‌,ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯಲ್ಲಿ ಸಾವಿರಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ದು, ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿತ್ತು.

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ಒಂದು ಸುತ್ತು ಮೆರವಣಿಗೆ ಮಾಡಿದರು. 

ಸಂಸದೆ ಶೋಭಾ ಕರಂದ್ಲಾಜೆ ಅವರು ಹಲ್ಲೆಗೀಡಾಗಿರುವ ಶರತ್‌ ಅವರ ಬಿ.ಸಿ.ರೋಡ್‌ನ‌ ಲಾಂಡ್ರಿಗೆ ಭೇಟಿ ನೀಡಿದರು. ಈ ವೇಳೆ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದರು. 

ಇದುವರೆಗೆ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.ಆರೋಪಿಗಳ ಶೋಧಕ್ಕಾಗಿ ಆರು ತನಿಖಾ ತಂಡಗಳನ್ನು ರಚಿಸ ಲಾಗಿದೆ. ಈಗಾಗಲೇ 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೂ ಮಹತ್ವದ ಸುಳಿವು ಲಭಿಸಿಲ್ಲ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ

ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೆಸ್ಸೆಸ್‌ ಕಾರ್ಯಕರ್ತ ಶರತ್‌ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಏನೂ ಆಗದೆ ಯಥಾ ಸ್ಥಿತಿಯಲ್ಲಿದೆ. ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿರುವ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

ತಾಲೂಕಿನಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.