ಜನನುಡಿ ಸಮಾವೇಶದಲ್ಲಿ ರೈಗೆ ಮುತ್ತಿಗೆ ಹಾಕಲು ಯತ್ನ; ಐವರ ಬಂಧನ
Team Udayavani, Dec 1, 2018, 4:49 PM IST
ಮಂಗಳೂರು: ಜನನುಡಿ ಸಮಾವೇಶಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ವಿರುದ್ಧ ಘೋಷಣೆ ಕೂಗಿ ಮುತ್ತಿಗೆ ಹಾಕಲು ಯತ್ನಿಸಿದ್ದ ಐವರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಶನಿವಾರ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ನಂತೂರಿನಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ನಡೆಯಲಿರುವ ಜನನುಡಿ ಸಮಾವೇಶದಲ್ಲಿ ಭಾಗವಹಿಸಲು ರೈ ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಘೋಷಣೆ ಕೂಗಿ ಸಮಾವೇಶದ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಆರೋಪದಡಿಯಲ್ಲಿ ಐವರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಶಬರಿಮಲೆ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ. ಅಲ್ಲಿಗೆ ಮಹಿಳೆಯರು ಹೋಗಬೇಕೆ ಅಥವ ಬೇಡವೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದರಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುತ್ತಿರುವುದರ ಬಗ್ಗೆ ತನಗೆ ಅಸಮಾಧಾನವಿದೆ ಎಂದು ರೈ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.