Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್ ವಿತರಿಸಲು ಎಟಿವಿಎಂ
ಪಾಲಕ್ಕಾಡ್ ವಿಭಾಗ ಯೋಜನೆ; ಸಹಾಯಕರ ನಿಯೋಜನೆಗೆ ಸಿದ್ಧತೆ
Team Udayavani, May 8, 2024, 6:55 AM IST
ಮಂಗಳೂರು: ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಕಾದಿರಿಸದ ಟಿಕೆಟ್‌ಗಳನ್ನು ನೀಡಲು ಸ್ವಯಂಚಾಲಿತ ಟಿಕೆಟ್ ವಿತರಣೆ ಯಂತ್ರ(ಎಟಿವಿಎಂ) ಅಳವಡಿಸಲಾಗಿದೆ. ಇದರಲ್ಲಿ ಈ ಹಿಂದೆಸಹಾಯಕರನ್ನು ನಿಯೋಜಿಸಿ ಟಿಕೆಟ್‌ಗಳನ್ನು ವಿತರಿಸಲಾಗು ತ್ತಿದ್ದರೂ ಕೋವಿಡ್ ಅವಧಿಯಲ್ಲಿ ಈ ಸೇವೆ ರದ್ದುಗೊಂಡಿತ್ತು.
ಪ್ರಯಾಣಿಕರಿಗೆ ನೇರವಾಗಿ ಇದರ ಬಳಕೆ ಕಷ್ಟವಾಗಿರುವುದರಿಂದ ಬಹುತೇಕ ಮಂದಿ ಕೌಂಟರ್‌ಗಳಿಂದಲೇ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ. ಇದೀಗ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಈ ಯಂತ್ರದ ಗರಿಷ್ಠ ಪ್ರಮಾಣದಲ್ಲಿ ಬಳಕೆಯಾಗಬೇಕು ಎನ್ನುವ ಉದ್ದೇಶದಿಂದ ಸಹಾಯಕರನ್ನು ನಿಯೋಜಿಸಿ ಟಿಕೆಟ್ ವಿತರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದೆ. ಅದರಂತೆ ಮೊದಲ ಹಂತದಲ್ಲಿ ಎಟಿವಿಎಂ ಇರುವ ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಮತ್ತು ಕಾಸರಗೋಡು ಸಹಿತ ವಿಭಾಗ ವ್ಯಾಪ್ತಿಗೆ 300 ಸಹಾಯಕರನ್ನು ನಿಯೋಜಿಸಲು ಮುಂದಾಗಿದೆ.
ಪ್ರಸ್ತುತ ಇಲಾಖಾ ಸಿಬಂದಿಯೇ ಪ್ರಯಾಣಿಕರಿಗೆ ಟಿಕೆಟ್ ಪಡೆಯಲು ನೆರವಾಗುತ್ತಿದ್ದಾರೆ. ಇದು ಅವರ ಕೆಲಸದ ಒತ್ತಡವನ್ನು ಹೆಚ್ಚಿಸಿದೆ. ಹಾಗಾಗಿ ಈ ಸಹಾಯಕರ ನಿಯೋಜನೆ ಯಾಗುತ್ತಿದೆ.
ಪ್ರತಿದಿನ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 8 ಲಕ್ಷ ರೂ. ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ 2 ಲಕ್ಷ ರೂ. ಮೌಲ್ಯದ ಕಾದಿರಿಸದ ಟಿಕೆಟ್ ವಿತರಣೆ ಆಗುತ್ತಿದೆ. ಇನ್ನು ಮುಂದೆ ಇದನ್ನು ಸಂಪೂರ್ಣವಾಗಿ ಎಟಿವಿಎಂ ಮೂಲಕವೇ ವಿತರಿಸುವುದು ಇಲಾಖೆಯ ಗುರಿ. ಮಂಗಳೂರು ಸೆಂಟ್ರಲ್‌ಗೆ 21 ಮತ್ತು ಜಂಕ್ಷನ್‌ಗೆ 9 ಸಿಬಂದಿ ನಿಯೋಜಿಸಲು ಉದ್ದೇಶಿಸಲಾಗಿದ್ದು, ದಿನದ 24 ಗಂಟೆಯೂ ಪ್ರಯಾಣಿಕರಿಗೆ ಈ ಸೇವೆ ದೊರೆಯಲಿದೆ.
ಒಂದು ವರ್ಷದ ಒಪ್ಪಂದದ ಆಧಾರದಲ್ಲಿ ಸಹಾಯಕರ ನೇಮಕಾತಿ ನಡೆಯಲಿದ್ದು, ಇವರು ರೈಲ್ವೇ ಇಲಾಖೆಯ ನೌಕರರಲ್ಲ. ಟಿಕೆಟ್ ಮಾರಾಟದ ಮೇಲಿನ ಕಮಿಷನ್ ಆಧಾರದಲ್ಲಿ ಈ ಸಹಾಯಕರ ಆದಾಯ ಪಡೆಯಲಿದ್ದಾರೆ. ಇದಕ್ಕಾಗಿ ರೈಲ್ವೇ ಅರ್ಜಿ ಆಹ್ವಾನಿಸಿದ್ದು, http://www.sr.indianrailways.gov.in ನಲ್ಲಿ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟ ಎಸೆಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 24 ಕೊನೇ ದಿನಾಂಕ ಎಂದು ರೈಲ್ವೇ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.