ಸುದಿನ ವರದಿ ಗಮನಿಸಿ ಅಧಿಕಾರಿಗಳಿಂದ ಅಂಗನವಾಡಿ ದುರಸ್ತಿ

Team Udayavani, Oct 19, 2017, 10:17 AM IST

19-Mng—3.jpg

ಮಹಾನಗರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಪರ್ದಿಯಲ್ಲಿರುವ ಉರ್ವ ಸ್ಟೋರ್‌ ಅಂಗನವಾಡಿ ಕಟ್ಟಡದ ದುಃಸ್ಥಿತಿಯ ಬಗ್ಗೆ ‘ಸುದಿನ’ ಅ.17ರಂದು ವಿಶೇಷ ವರದಿ ಪ್ರಕಟಿಸಿದ್ದು, ಎಚ್ಚೆತ್ತ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ತತ್‌ಕ್ಷಣವೇ ಕಾಮಗಾರಿ ನಡೆಸುವಂತೆ ಆದೇಶಿಸಿದ್ದಾರೆ.

‘ಸುದಿನ’ ವರದಿ ಗಮನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ, ಇಲಾಖೆ ಅಧಿಕಾರಿ ಶೋಭಾ, ಲೋಕೋಪಯೋಗಿ ಹಾಗೂ ಇತರ ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯೇ ಅಂಗನವಾಡಿ ಕಟ್ಟಡವನ್ನು ಪರಿಶೀಲಿಸಿದರು. ಕೂಡಲೇ ತುರ್ತು ಕಾಮಗಾರಿ ನಡೆಸಬೇಕೆಂಬ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕಟ್ಟಡಕ್ಕೆ ಹಾಸಿರುವ ಶೀಟ್‌ಗಳು ತುಕ್ಕು ಹಿಡಿದು ಸವೆದು ಹೋಗಿದ್ದವು. ಸದ್ಯ ಏಳು ಹೊಸ ಶೀಟ್‌ಗಳನ್ನು ಹಾಕಲಾಗಿದೆ. ಬೆಳಗ್ಗಿನಿಂದಲೇ ಅಂಗನವಾಡಿ ಕಾರ್ಯಕರ್ತೆಯರು ಈ ಪ್ರದೇಶವನ್ನು ಸ್ವತ್ಛಗೊಳಿಸಿದ್ದಾರೆ. ಬಿರುಕುಬಿಟ್ಟ ಗೋಡೆಗಳಿಗೆ ಸಿಮೆಂಟ್‌ ತೇಪೆ ಹಚ್ಚಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಂಗಳೂರು ವಿಭಾಗದ ಅಧಿಕಾರಿ ಶೋಭಾ ಅವರು ತುರ್ತು ಕಾಮಗಾರಿ ಪೂರ್ಣಗೊಳ್ಳುವವರೆಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಸ್ಥಳಾಂತರಕ್ಕೆಪೋಷಕರು ಒಪ್ಪುತ್ತಿಲ್ಲ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ಅವರು ಅಂಗನವಾಡಿಗೆ ಭೇಟಿ ನೀಡಿ, ಕಾಮಗಾರಿ ವೇಳೆಯಲ್ಲಿ ಮಕ್ಕಳನ್ನು ಹತ್ತಿರದ ಆಶಾ ಕಾರ್ಯಕರ್ತೆಯರ ಕಟ್ಟಡಕ್ಕೆ ಸ್ಥಳಾಂತರಗೊಳಿಸಿ ಎಂದು ಸೂಚನೆ ನೀಡಿದ್ದಾರೆ. ಆದರೆ, ಈಗಿನ ಕಟ್ಟಡ ದೊಡ್ಡದಾಗಿದೆ. ಇಲ್ಲಿಯೇ ಪಾಠ ಮಾಡಿ, ಮಕ್ಕಳನ್ನು ಸ್ಥಳಾಂತರಿಸಬೇಡಿ ಎಂದು ಪೋಷಕರು ಹೇಳುತ್ತಿದ್ದಾರೆಂದು ಅಂಗನವಾಡಿಯ ಕಾರ್ಯಕರ್ತೆಯರು ತಿಳಿಸಿದ್ದಾರೆ.

ಮಹಿಳಾ ಮಂಡಲದಿಂದ ಪ್ರಗತಿ ಕಾರ್ಯ
ಈವರೆಗಿನ ಎಲ್ಲ ಕಾಮಗಾರಿ ವೆಚ್ಚವನ್ನು ಪ್ರಗತಿ ಮಹಿಳಾ ಮಂಡಲ ಸದಸ್ಯರೇ ಭರಿಸಿದ್ದಾರೆ. ಅಂಗನವಾಡಿ ಕೇಂದ್ರ ಪೂರ್ಣವಾಗಿ ಸರಕಾರದ ಸುಪರ್ದಿಗೆ ಬಾರದ ಕಾರಣದಿಂದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುದಾನ ಬಿಡುಗಡೆಗೊಳ್ಳುವುದಿಲ್ಲ. ಈ ಕಟ್ಟಡದ ಎಲ್ಲ ಕಾಮಗಾರಿಗೆ ಮಹಿಳಾ ಮಂಡಳದ ಸದಸ್ಯರೇ ಹಣ ವಿನಿಯೋಗಿಸಬೇಕು. ಕಾರ್ಯಕರ್ತರ ಪ್ರಕಾರ, ಈವರೆಗಿನ ಕಾಮಗಾರಿಗೆ 30 ಸಾವಿರ ರೂ. ಬಳಕೆಯಾಗಿದೆ. 

ಅರಣ್ಯ ಇಲಾಖೆಗೆ ಪತ್ರ
ಅಂಗನವಾಡಿ ಕಟ್ಟಡದ ಪಕ್ಕದಲ್ಲಿಯೇ ದೊಡ್ಡದಾದ ಮರವಿದ್ದು, ಇದರ ರೆಂಬೆಗಳು ಬಿದ್ದು ಅಂಗನವಾಡಿ ಕಟ್ಟಡದ ಕೆಲವು ಶೀಟ್‌ಗಳು ತುಂಡಾಗಿವೆ. ಈ ಬಗ್ಗೆ ಮಹಿಳಾ ಮಂಡಳಿ ಕಾರ್ಯಕರ್ತೆಯರು ಅರಣ್ಯ ಇಲಾಖೆಗೆ ಪತ್ರ ಬರೆದು, ರೆಂಬೆಗಳನ್ನು ಕತ್ತರಿಸುವಂತೆ ಮನವಿ ಸಲ್ಲಿಸಿದ್ದಾರೆ.

ಕಾರ್ಯಕರ್ತೆಯರಿಗೆ ಸೂಚನೆ
ಹೊಸದಾಗಿ ಅಂಗನವಾಡಿ ತೆರೆಯಲು ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶದ ಕೊರತೆ ಇದೆ. ಆದರೂ ಎಲ್ಲೆಲ್ಲಿ ಸ್ಥಳಾವಕಾಶ ಲಭ್ಯವಿದೆ ಎಂದು ಗುರುತಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಿದ್ದೇನೆ. ಸದ್ಯ ಕಟ್ಟಡದ ತುರ್ತು ಕಾಮಗಾರಿ ನಡೆಸಲಾಗಿದೆ.
– ಶೋಭಾ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಮಂಗಳೂರು

ಕಟ್ಟಡಕ್ಕೆ ಸುಣ್ಣ ಬಳಿಯುತ್ತೇವೆ 
ಪ್ರೇರಣಾ ಮಹಿಳಾ ಮಂಡಳಿ ಸದಸ್ಯೆ ಪುಷ್ಪಾವತಿ ಪ್ರತಿಕ್ರಿಯಿಸಿ, ಮಳೆ ಬಂದ ಕಾರಣ ಸುಣ್ಣ ಬಳಿಯಲು ಸಮಯ ತೆಗೆದುಕೊಳ್ಳುತ್ತದೆ. ಇನ್ನೆರಡು ದಿನಗಳನ್ನು ಪೂರ್ತಿ ಕಟ್ಟಡಕ್ಕೆ ಸುಣ್ಣ ಬಳಿಯುತ್ತೇವೆ. ಹೊಸದಾಗಿ 7 ಶೀಟ್‌ಗಳನ್ನು ಅಳವಡಿಸಿದ್ದೇವೆ. ಬಿರುಕು ಬಿಟ್ಟ ಗೋಡೆಗಳಿಗೆ ಸಿಮೆಂಟ್‌ ಹಾಕಿದ್ದೇವೆ ಎಂದರು.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.