ಚಿನ್ನಾಭರಣ ಮರಳಿಸಿದ ರಿಕ್ಷಾ ಚಾಲಕ
Team Udayavani, Jul 3, 2018, 4:15 AM IST
ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅರೆಮಲೆ ಬೆಟ್ಟ ನಿವಾಸಿ, ರಿಕ್ಷಾ ಚಾಲಕ ಪೊಡಿಮೋನು ಅವರು ನಾಳಕ್ಕೆ ಬಾಡಿಗೆ ತೆರಳಿ ಹಿಂದಿರುಗುವ ವೇಳೆಗೆ ರಸ್ತೆ ಬದಿಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಹಸ್ತಾಂತರಿಸಿ ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.
ಜೂ. 30ರ ರಾತ್ರಿ ನಾಳ – ಪರಪ್ಪು ಮಧ್ಯೆ ಈ ಬ್ಯಾಗ್ ಸಿಕ್ಕಿದ್ದು, ಅದನ್ನು ಜತೆಗಿದ್ದವರೊಂದಿಗೆ ಸೇರಿ ಪರಿಶೀಲಿಸಿದಾಗ ಚಿನ್ನಾಭರಣ, ನಗದು ಹಾಗೂ ಸ್ವಿಚ್ಡ್ ಆಫ್ ಆಗಿದ್ದ ಮೊಬೈಲ್ ಕಂಡು ಬಂತು. ಬಳಿಕ ಅದೇ ಮೊಬೈಲ್ ನಿಂದ ಸಂಬಂಧಪಟ್ಟವರನ್ನು ಸಂಪರ್ಕಿಸಿ ಚಿನ್ನಾಭರಣ, ನಗದನ್ನು ಮರಳಿಸಿದ್ದಾರೆ. ಪರ್ಸ್ ಕಳೆದುಕೊಂಡವರು ಪುತ್ತೂರು ಬಲ್ನಾಡಿನವರಾಗಿದ್ದು, ಪೊಡಿ ಮೋನು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇವರು 1982ರಿಂದ ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದು, ಪೋಡಿಯಾಕ ಎಂದೇ ಚಿರಪರಿಚಿತರಾಗಿದ್ದಾರೆ. 2014ರಲ್ಲೂ ಇವರಿಗೆ ಇಂಥದ್ದೇ ಅಮೂಲ್ಯ ಬ್ಯಾಗ್ ಸಿಕ್ಕಿದ್ದು, ಆಗಲೂ ವಾರಸುದಾರರಿಗೆ ಹಸ್ತಾಂತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.