ಮಾನವೀಯತೆ ಮೆರೆದ ಉಪ್ಪಿನಂಗಡಿ ಆಟೋ ಚಾಲಕರು
Team Udayavani, Nov 6, 2017, 4:37 PM IST
ಉಪ್ಪಿನಂಗಡಿ: ಗ್ರಾಮೀಣ ಪ್ರದೇಶದಲ್ಲಿ ಆಟೋ ರಿಕ್ಷಾ ಚಾಲಕರ ಬದುಕಿನಲ್ಲಿ ಹಲವು ಸಮಸ್ಯೆಗಳು ಸಾಮಾನ್ಯ. ಆದರೆ ತಮ್ಮದೇ ಸಮಸ್ಯೆಗಳ ನಡುವೆಯೂ ಉಪ್ಪಿನಂಗಡಿಯ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಅಸಾಹಯಕರೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ.
ಬಸ್ಸಿಗೆ ಹಣವಿಲ್ಲದೆ ಅಪರಿಚಿತ ಊರಿನಲ್ಲಿ ಒಬ್ಬಂಟಿಯಾಗಿದ್ದ ಚಿತ್ರದುರ್ಗದ ಯುವಕನಾದ ಮೋಹನ್ ಅವರಿಗೆ ಆಟೋ ರಿಕ್ಷಾದವರು ಹಣ ಸಂಗ್ರಹಿಸಿ ಅವರನ್ನು ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಮೋಹನ್ ಅವರು ಚಿತ್ರದುರ್ಗದ ಹೊಳಲ್ಕೆರೆಯವರಾಗಿದ್ದು, ಅವರ ಗೆಳೆಯ ಪುತ್ತೂರಿನಲ್ಲಿ ಕೆಲಸಕ್ಕಿದ್ದರು. ಆತನಿಗೆ ನೀಡಿದ ಸಾಲವನ್ನು ವಸೂಲಿ ಮಾಡುವ ಮತ್ತು ಪುತ್ತೂರಿನಲ್ಲಿಯೇ ಕೆಲಸ ಮಾಡುವ ಉದ್ದೇಶವನ್ನಿಟ್ಟುಕೊಂಡು ಎರಡು ದಿನಗಳ ಹಿಂದೆ ಮೋಹನ್ ಅವರು ಪುತ್ತೂರಿಗೆ ಆಗಮಿಸಿದ್ದರು. ಆದರೆ ಇವರ ಸ್ನೇಹಿತ ಪುತ್ತೂರಿನಲ್ಲಿ ಕೆಲಸ ಬಿಟ್ಟು ಮುಂಬಯಿಗೆ ತೆರಳಿದ್ದ. ಇದರಿಂದ ಲೆಕ್ಕದ ಹಣ ಹಿಡಿದು ಕೊಂಡು ಬಂದ ಇವರು ಕೈಯಲ್ಲಿ ಹಣವಿಲ್ಲದೆ ಪುತ್ತೂರಿನಲ್ಲಿ ಸಿಲುಕಿಕೊಳ್ಳುವಂತಾಯಿತು.
ಶುಕ್ರವಾರ ಪುತ್ತೂರು ಬಸ್‌ನಿಲ್ದಾಣದಲ್ಲೇ ಅವರ ಸಂಕಷ್ಟದ ಸ್ಥಿತಿ ಕಂಡು ಕೂಡಲೇ ಕಾರ್ಯಪ್ರವೃತ್ತರಾದ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಪರಸ್ಪರ ಕೈಜೋಡಿಸಿ ಪ್ರಯಾಣ, ಊಟ ಸೇರಿದಂತೆ ಸುಖಕರವಾಗಿ ಊರಿಗೆ ಮುಟ್ಟಲು ಸಾಕಾಗುವಷ್ಟು ಹಣ ಸಂಗ್ರಹಿಸಿ ಮೋಹನ್ ಅವರಿಗೆ ಹಸ್ತಾಂತರಿಸಿದರು. ನೇತ್ರಾವತಿ ಆಟೋರಿಕ್ಷಾ ಚಾಲಕ-ಮಾಲಕ ಸಂಘದ ಅಧ್ಯಕ್ಷ ಕೆ.ಎಸ್. ಅಬ್ದುಲ್ ಲತೀಫ್, ಜತೆ ಕಾರ್ಯದರ್ಶಿ ಖಲಂದರ್ ಶಾಫಿ, ಸಂಘಟನ ಕಾರ್ಯದರ್ಶಿ ಬಶೀರ್ ಗಾಂಧಿಪಾರ್ಕ್, ಸದಸ್ಯ ಅಬ್ದುರ್ರಹ್ಮಾನ್ ಕಡವಿನ ಬಾಗಿಲು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.