ಮಂಗಳೂರು ನಗರ, ಗ್ರಾಮಾಂತರ ಆಟೋ ಯಾನ ದರ ಪರಿಷ್ಕರಣೆ

ಕನಿಷ್ಠ ದರ 35 ರೂ.; ಬಳಿಕ ಪ್ರತೀ ಕಿ.ಮೀ. 20 ರೂ.

Team Udayavani, Dec 2, 2022, 5:20 AM IST

ನಗರ, ಗ್ರಾಮಾಂತರ ಆಟೋ ಯಾನ ದರ ಪರಿಷ್ಕರಣೆ: ಕನಿಷ್ಠ ದರ 35 ರೂ.; ಬಳಿಕ ಕಿ.ಮೀ. 20 ರೂ.

ಮಹಾನಗರ : ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಸಂಚರಿಸುವ ಆಟೋ ರಿಕ್ಷಾ ದರ ಪರಿಷ್ಕರಣೆಗೊಂಡಿದ್ದು, ನೂತನ ದರ ಗುರುವಾರ (ಡಿ. 1)ದಿಂದ ಜಾರಿಗೆ ಬಂದಿದೆ. ನಗರದಲ್ಲಿ ಸಂಚರಿಸುವ ಎಲ್ಲ ಆಟೋ ರಿಕ್ಷಾಗಳಲ್ಲಿ ಹೊಸ ದರ ನಿಗದಿಪಡಿಸಲಾಗಿದ್ದು, ಆ ಮೂಲಕ ಬಾಡಿಗೆ ದರ ನಿಗದಿಪಡಿಸಲಾಗಿದೆ. ಬಹುತೇಕ ರಿಕ್ಷಾಗಳ ಮೀಟರ್‌ಗಳಲ್ಲಿ . ನೂತನ ದರವನ್ನು ಅಳವಡಿಸಲಾಗಿದೆ. ಆ ಸಂಬಂಧಿಸಿದ ಚಾರ್ಟ್‌ಗಳನ್ನು ಆಟೋ ರಿಕ್ಷಾ ಮಾಲಕರಿಗೆ ನೀಡಲಾಗಿದೆ.

ಆಟೋ ರಿಕ್ಷಾ ಬಾಡಿಗೆ ದರ ಪರಿಷ್ಕರಿಸಬೇಕು ಎಂದು ಆಟೋ ಚಾಲಕರದ್ದು ಹಲವು ವರ್ಷಗಳ ಬೇಡಿಕೆ. ಈ ಕುರಿತು ಈ ಹಿಂದೆ ಅನೇಕ ಸಭೆ ನಡೆದರೂ ಒಮ್ಮತದ ತೀರ್ಮಾನ ಆಗಿರಲಿಲ್ಲ. ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ರಾಗಿರುವ ಜಿಲ್ಲಾಧಿಕಾರಿ (ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಡಾ| ಕುಮಾರ್‌ ಅವರು) ಅ. 27ರಂದು ಆಟೋ ಪ್ರಯಾಣ ದರವನ್ನು ನ. 15ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಅಧಿ ಸೂಚನೆ ಹೊರಡಿಸಿದ್ದರು. ಆದರೆ ಈ ಪರಿಷ್ಕೃತ ದರ ಬೇಡಿಕೆಗಿಂತ ಕಡಿಮೆ ಇದ್ದುದರಿಂದ ಅಧಿಸೂಚನೆ ಹೊರಡಿಸಿದ ಕ್ಷಣದಿಂದಲೇ ಚಾಲಕ-ಮಾಲಕರ ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದರು. ಆದರೆ ಈ ದರ ಜಾರಿಯಾಗಲಿಲ್ಲ. ಬಳಿಕ ಡಿ. 1ರಿಂದ ಅನ್ವಯವಾಗುವಂತೆ ಹೊರಡಿಸಿದ ಪರಿಷ್ಕೃತ ಅಧಿಸೂಚನೆ ಸದ್ಯ ಪಾಲನೆಯಾಗುತ್ತಿದೆ.
“ಉದಯವಾಣಿ ಸುದಿನ’ ಜತೆ ಮಾತನಾಡಿದ ಮಂಗಳೂರು ನಗರ ಆಟೋ ರಿಕ್ಷಾ ಚಾಲಕ-ಮಾಲಕರ ಒಕ್ಕೂಟದ ಗೌರವ ಸಲಹೆಗಾರ ಅರುಣ್‌ ಕುಮಾರ್‌ ಅವರು, “ಜಿಲ್ಲಾಡಳಿತ, ಸಾರಿಗೆ ಇಲಾಖೆ ಪರಿಷ್ಕೃತ ದರವನ್ನು ಪ್ರಕಟಿಸಿದ್ದು, ಅದರಂತೆ ಡಿ. 1ರಿಂದ ಜಾರಿಗೆ ತರಲಾಗಿದೆ. ನೂತನ ದರವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ’ ಎಂದಿದ್ದಾರೆ.

ನೂತನ ದರವೆಷ್ಟು?
ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಡಿ. 1ರಿಂದ ಅನ್ವಯವಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ. ಕಾಯುವಿಕೆ ಮೊದಲ 15 ನಿಮಿಷ ಉಚಿತ. ಅನಂತರ 15 ನಿಮಿಷದ ವರೆಗೆ 5 ರೂ. ಇರಲಿದೆ. ಪ್ರಯಾಣಿಕರ ಸರಕಿಗೆ (ಲಗೇಜ್‌) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜತೆಗೆ ಇರಬೇಕು. ಮೊದಲ 20 ಕಿ.ಗ್ರಾಂ.ಗಳಿಗೆ ಉಚಿತ ಮತ್ತು ಅನಂತರ ಪ್ರತೀ 10 ಕಿಲೋ ಗ್ರಾಂ ಅಥವಾ ಅದರ ಭಾಗಕ್ಕೆ 5 ರೂ. ಹೆಚ್ಚುವರಿ ನೀಡಬೇಕಾಗಿದೆ. ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ಪಡೆಯಲು ಅವಕಾಶ ಇದೆ.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.