ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
Team Udayavani, Feb 4, 2019, 6:11 AM IST
ಪುತ್ತೂರು: ದ.ಕ. ಹಾಗೂ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ಅರೆಭಾಷಿಕ ಜನರು, ಕೃಷಿಯಿಂದ ಹಿಡಿದು ಸೈನ್ಯದ ತನಕ ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಅನನ್ಯ ಕೊಡುಗೆ ನೀಡಿದ್ದಾರೆ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆರಂಭಗೊಳ್ಳುವ ಇಲ್ಲಿನ ಜನಜೀವನದ ಸಾಧನೆ ಎಲ್ಲೆಡೆ ಪಸರಿಸಲು ಸಹಕಾರಿಯಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ವತಿಯಿಂದ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆದ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ -2018 ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಹಿರಿಯರು, ಜ್ಞಾನ ವೃದ್ಧರ ಸಹಕಾರ ಸಮಾ ಜಕ್ಕೆ ಇದ್ದಾಗ ಪ್ರಗತಿ ಸಾಧ್ಯ. ಗುರುವಿನ ಮಾರ್ಗದರ್ಶನ ಜೀವ ದ್ರವವಿದ್ದಂತೆ. ಸಾರಸ್ವತ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ ಗುರುಗಳು, ಮಾರ್ಗದರ್ಶಕರನ್ನು ಸಮ್ಮಾನ ಮಾಡಿರುವುದು ಅಭಿಮಾನದ ವಿಚಾರ. ಭೌಗೋಳಿಕ ಆಚಾರ, ವಿಚಾರಗಳ ಶ್ರೀಮಂತಿಕೆಯನ್ನು ತಿಳಿಸುವ ಕೆಲಸವನ್ನು ಭಾಷೆ ಮಾಡುತ್ತದೆ. ಆ ಭಾಷೆ ಬೆಳೆದಾಗ ಸಂಸ್ಕೃತಿ ತಿಳಿಯಲು, ಬೆಳೆಯಲು ಸಾಧ್ಯ ಎಂದು ಹೇಳಿದರು.
ಉತ್ತಮ ಕಾರ್ಯ
ಅಭಿನಂದನ ಮಾತುಗಳನ್ನಾಡಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ಭಾಷಾ ವಿಜ್ಞಾನಿಯಾಗಿ ಅರೆಭಾಷೆಯ ಉಚ್ಛಾರಶಾಸ್ತ್ರ,ಶಾಸ್ತ್ರೀಯ ಚೌಕಟ್ಟು ತಂದ ಪ್ರೊ| ಕೋಡಿ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಡಾ| ಸುಕುಮಾರ ಗೌಡ, ಅರೆಭಾಷಾ ಬೆಳವಣಿಗೆಯಲ್ಲಿ ಅವಿರತ ಶ್ರಮಿಸಿದ ಕಾಳೆಯಂಡ ತಂಗಮ್ಮ ಅಪ್ಪಚ್ಚು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸುವ ಮೂಲಕ ಅಕಾಡೆಮಿಯು ಸ್ತುತ್ಯರ್ಹ ಕಾರ್ಯ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ. ಅನುದಾನಗಳ ಮೂಲಕವೂ ಗ್ರಾಮದ ಅಭಿ ವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದರು.
ಜಿ.ಪಂ. ಸದಸ್ಯೆ ಶಯನಾ ಜಯಾನಂದ, ಮಾಜಿ ಸದಸ್ಯ ಕೇಶವ ಗೌಡ ಬಜತ್ತೂರು, ತಾ.ಪಂ. ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ತಾ.ಪಂ. ಮಾಜಿ ಅಧ್ಯಕ್ಷ ಜಯಾನಂದ, ಗ್ರಾ.ಪಂ. ಉಪಾಧ್ಯಕ್ಷ ಬಾಬು ಗೌಡ, ಸದಸ್ಯರಾದ ಭವ್ಯಾ, ಯಶೋದಾ, ಭವಾನಿ, ಲಿಂಗಪ್ಪ ಹಾಗೂ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಉಪಸ್ಥಿತರಿದ್ದರು.
ಬನ್ನೂರು ರೈತರ ಸೇ.ಸ. ಸಂಘದ ನಿರ್ದೇಶಕ ಮೋಹನ ಪಕ್ಕಳ ಕುಂಡಾಪು ಸ್ವಾಗತಿಸಿ, ರಾಮಚಂದ್ರ ಪೂಜಾರಿ ವಂದಿಸಿದರು. ಗ್ರಾ.ಪಂ. ಸದಸ್ಯ ಮನೋಹರ್ ಗೌಡ ಡಿ.ವಿ. ಕಾರ್ಯಕ್ರಮ ನಿರ್ವಹಿಸಿದರು.
ಅಕಾಡೆಮಿ ಪ್ರಶಸ್ತಿ ಪ್ರದಾನ
ಅರೆಭಾಷೆ ಸಾಹಿತ್ಯ ಕ್ಷೇತ್ರ, ಅಧ್ಯಯನ ಹಾಗೂ ಸಂಶೋಧನೆ ಮತ್ತು ಅರೆಭಾಷೆ ಸಂಸ್ಕೃತಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಪ್ರೊ| ಕೋಡಿ ಕುಶಾಲಪ್ಪ ಗೌಡ, ಡಾ| ಎನ್. ಸುಕುಮಾರ ಗೌಡ, ಕಾಳೆಯಂಡ ತಂಗಮ್ಮ ಅಪ್ಪಚ್ಚು ಅವರನ್ನು 2018ರ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಪ್ರಶಸ್ತಿಯೊಂದಿಗೆ 50 ಸಾವಿರ ರೂ. ನಗದು, ಹಾರ, ಫಲ ತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.