Ayodhya ರಾಮಮಂದಿರ ಲೋಕಾರ್ಪಣೆ: ಮನೆ ಮನೆಗೆ ಮಂತ್ರಾಕ್ಷತೆ

ಜ. 22: ಧಾರ್ಮಿಕ ಕೇಂದ್ರಗಳಲ್ಲಿ ನೇರಪ್ರಸಾರ

Team Udayavani, Dec 20, 2023, 11:47 PM IST

Ayodhya ರಾಮಮಂದಿರ ಲೋಕಾರ್ಪಣೆ: ಮನೆ ಮನೆಗೆ ಮಂತ್ರಾಕ್ಷತೆ

ಮಂಗಳೂರು: ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ, ಶ್ರೀರಾಮ ಲಲ್ಲಾನ ವಿಗ್ರಹ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಮನೆ ಮನೆ ಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನವರಿ 22ರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ಸುಮುಹೂರ್ತದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದನ್ನು ಪ್ರತೀ ರಾಮಭಕ್ತರು ತಮ್ಮತಮ್ಮ ಊರು, ಮನೆಗಳಲ್ಲಿ ಸಂಭ್ರಮದಿಂದ ಆಚರಿ ಸುವಂತಾಗಲು ಈ ಅಭಿಯಾನ ನಡೆಯಲಿದೆ. ಅಯೋಧ್ಯೆಯಲ್ಲಿ ನಡೆಯುವ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ನೇರಪ್ರಸಾರ ಮೂಲಕ ತೋರಿಸಲು ವ್ಯವಸ್ಥೆ ಮಾಡಲಾಗುತ್ತದೆ. ಜ. 1ರಿಂದ 15ರ ವರೆಗೆ ವಿಹಿಂಪ ಕಾರ್ಯಕರ್ತರು 8 ಲಕ್ಷ ಮನೆಗಳಿಗೆ ಮಂತ್ರಾಕ್ಷತೆ, ರಾಮಮಂದಿರದ ಭಾವಚಿತ್ರ, ಆಮಂತ್ರಣ ಪತ್ರವನ್ನು ವಿತರಿಸಲಿದ್ದಾರೆ ಎಂದರು.

ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಮಾತನಾಡಿ, ಈಗಾಗಲೇ ಬೂತ್‌, ಗ್ರಾಮಗಳಿಗೆ ಮಂತ್ರಾಕ್ಷತೆ ತಲುಪಿದೆ. ಜ. 22ರಂದು ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀರಾಮ ತಾರಕ ಮಂತ್ರ 108 ಬಾರಿ ಪಠಣ, ಹನುಮಾನ್‌ ಚಾಲೀಸಾ, ಭಜನೆ, ಸುಂದರಕಾಂಡ ಪಾರಾಯಣ, ರಾಮರûಾ ಸ್ತೋತ್ರ ಪಠಣ ಇತ್ಯಾದಿ ನಡೆಸಲು ತಿಳಿಸಲಾಗಿದೆ. ಸಾವಿರಾರು ಧಾರ್ಮಿಕ ಕ್ಷೇತ್ರಗಳಲ್ಲಿ ಇದಕ್ಕಾಗಿ ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ಮತ್ತೆ ದೀಪಾವಳಿ
ಶ್ರೀರಾಮಲಲ್ಲಾನ ವಿಗ್ರಹ ಪ್ರತಿಷ್ಠೆಯ ದಿನ ಸೂರ್ಯಾಸ್ತದ ಬಳಿಕ ಎಲ್ಲ ಮನೆಗಳಲ್ಲಿ ಕನಿಷ್ಠ ಐದು ದೀಪ ಬೆಳಗಬೇಕು, ಮನೆಯವರೆಲ್ಲರೂ ಸೇರಿ ಅಯೋಧ್ಯೆ ಮಂದಿರ ಇರುವ ಉತ್ತರ ದಿಕ್ಕಿಗೆ ಮುಖ ಮಾಡಿ ಮಹಾ ಮಂಗಳಾರತಿ ಬೆಳಗಬೇಕು. ಆ ದಿನ ಸಮಸ್ತ ಹಿಂದೂಗಳಿಗೆ ದೀಪಾವಳಿಯಾಗಲಿದೆ. ಜ. 7ರಂದು ವಿಶೇಷ ಮಹಾಸಂಪರ್ಕ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿದೆ ಎಂದರು.

ಸೀಮಿತ ಅವಕಾಶ
ಸ್ಥಳಾವಕಾಶ, ಭದ್ರತೆ ಇತ್ಯಾದಿ ಕಾರಣಗಳಿಂದಾಗಿ ಪ್ರತಿಷ್ಠೆಯ ದಿನ ಸೀಮಿತ ಮಂದಿಗೆ ಮಾತ್ರವೇ ಅಯೋಧ್ಯೆಯಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿದೆ. ರಾಜ್ಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಉಡುಪಿಯ ಅಷ್ಟಮಠಾಧಿಪತಿಗಳು, ಪ್ರೊ| ಪುರಾಣಿಕ್‌ ಸಹಿತವಾಗಿ ತೆರಳಲಿ ದ್ದಾರೆ. ಮುಂದೆ ಆಸಕ್ತರೆಲ್ಲರಿಗೂ ತೆರಳುವುದಕ್ಕೆ ಅವಕಾಶ ಸಿಗಲಿದೆ.

ವಿಹಿಂಪ ಜಿಲ್ಲಾಧ್ಯಕ್ಷ ಎಚ್‌.ಕೆ. ಪುರುಷೋತ್ತಮ, ಶ್ರೀರಾಮ ಮಂದಿರ ಅಭಿಯಾನ ಪ್ರಾಂತ ಸಹಸೇವಾ ಪ್ರಮುಖ್‌ ಗೋಪಾಲ್‌ ಕುತ್ತಾರ್‌, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್‌, ಬಜರಂಗದಳ ವಿಭಾಗ ಸಹ ಸಂಯೋಜಕ ಪುನೀತ್‌ ಅತ್ತಾವರ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.