ಗ್ರಾ.ಪಂ.ಗಳಲ್ಲೂ ಸಿಗಲಿದೆ “ಆಯುಷ್ಮಾನ್ ಭಾರತ್’ ಕಾರ್ಡ್
ಗ್ರಾಮೀಣ ಜನರಿಗೆ ಸೌಲಭ್ಯ ವಿಸ್ತರಣೆಗೆ ಕ್ರಮ' 10 ರೂ. ಶುಲ್ಕ; ಕೆಲವೇ ದಿನಗಳಲ್ಲಿ ಲಭ್ಯ
Team Udayavani, Dec 19, 2019, 6:20 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಬಡವರಿಗೆ ಆರೋಗ್ಯ ಭದ್ರತೆ ಒದಗಿಸುವ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆ ಕಾರ್ಡ್ ಇನ್ನು ಮುಂದೆ ಗ್ರಾಮ ಪಂಚಾಯತ್‌ನಲ್ಲಿಯೂ ಪಡೆಯಬಹುದು.
ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆಯಡಿ ಕಾರ್ಡ್‌ಗಳನ್ನು ಈಗಾಗಲೇ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆ, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಸಿಎಸ್‌ಸಿಗಳಲ್ಲಿ ನೀಡಲಾಗುತ್ತಿದೆ. ಆದರೂ ಗ್ರಾಮೀಣ ಬಡ ಕುಟುಂಬಗಳಿಗೆ ಕಾರ್ಡ್ ವಿತರಣೆ ಪೂರ್ಣ ಮಟ್ಟದಲ್ಲಿ ಆಗಿರಲಿಲ್ಲ. ಗ್ರಾ.ಪಂ.ಗಳಲ್ಲಿ ವಿತರಿಸಿದರೆ ಜನಸಾಮಾನ್ಯರಿಗೆ ಹೆಚ್ಚು ಅನುಕೂಲ ಎಂಬ ಕಾರಣದಿಂದ ಗ್ರಾ.ಪಂ.ಗಳಿಗೆ ಕಾರ್ಡ್ ವಿತರಣೆ ಜವಾಬ್ದಾರಿ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದಾಗಿದೆ.
ಪಂಚತಂತ್ರ ತಂತ್ರಾಂಶದ ಮೂಲಕ ಈಗಾಗಲೇ ಸಾರ್ವಜನಿಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಸೇವೆಗಳನ್ನು ಗ್ರಾ.ಪಂ.ಗಳು ನೀಡುತ್ತಿವೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಇದಕ್ಕೆ ಹೊಸ ಸೇರ್ಪಡೆ.
ವಿತರಣೆ ಹೇಗೆ?
ಗ್ರಾ.ಪಂ.ನ ಬಾಪೂಜಿ ಸೇವಾ ಕೇಂದ್ರಗಳಲ್ಲಿ “ಆರೋಗ್ಯ ಕರ್ನಾಟಕ’ ವೆಬ್‌ಸೈಟ್ ಮೂಲಕ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಗುತ್ತದೆ. ಎಲ್ಲ ಗ್ರಾ.ಪಂ.ಗಳಿಗೆ ಪ್ರತ್ಯೇಕವಾಗಿ ಲಾಗಿನ್ ಐಡಿ, ಪಾಸ್‌ವರ್ಡ್ ಒದಗಿಸಲಾಗಿದೆ. ಇ-ಹಾಜರಾತಿಗೆ ಬಳಸಲಾಗುತ್ತಿರುವ ಕಂಪ್ಯೂಟರ್ ಮೂಲಕ ಮಾತ್ರ ಕಾರ್ಡ್ ವಿತರಿಸಲು ಅವಕಾಶವಿದೆ. 10 ರೂ. ಶುಲ್ಕದೊಂದಿಗೆ ಎ4 ಅಳತೆಯ “ಆಯುಷ್ಮಾನ್ ಭಾರತ್’ನ ಮುದ್ರಿತ ಮಾಹಿತಿ ಒದಗಿಸಲಾಗುತ್ತದೆ.
ಅಧಿಕಾರಿಗಳಿಗೆ ತರಬೇತಿ
ಜಿಲ್ಲಾ ಕುಷ್ಠರೋಗ ಅಧಿಕಾರಿಗಳು ಇದಕ್ಕೆ ನೋಡಲ್ ಅಧಿಕಾರಿಗಳಾಗಿದ್ದು, ಎಲ್ಲ ಪಿಡಿಒಗಳು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ತರಬೇತಿ ನೀಡಲಿದ್ದಾರೆ. ಎಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ಜನಸಾಮಾನ್ಯರಿಗೆ, ನೌಕರರಿಗೆ, ಆಶಾ ಕಾರ್ಯಕರ್ತೆಯರಿಗೆ, ಶಾಲಾ ಮಕ್ಕಳಿಗೆ ಮತ್ತು ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವವರಿಗೆ ಶಿಬಿರ ಮಾದರಿಯಲ್ಲಿ ಕಾರ್ಡ್ ವಿತರಿಸಲಾಗುತ್ತದೆ.
ಗ್ರಾ.ಪಂ.ನ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆನ್‌ಲೈನ್ ಸೇವೆಗಳ ಜತೆಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಗ್ರಾ.ಪಂ. ಅಧಿಕಾರಿಗಳಿಗೆ ಗುರುವಾರದಿಂದ ತರಬೇತಿ ನೀಡಲಾಗುತ್ತದೆ. ಕೆಲವೇ ದಿನಗಳಲ್ಲಿ ಈ ಸೇವೆ ಗ್ರಾ.ಪಂ. ಮಟ್ಟದಲ್ಲಿ ಜನರಿಗೆ ದೊರೆಯಲಿದೆ.
– ಡಾ| ಸೆಲ್ವಮಣಿ ಆರ್., ಸಿಇಒ, ದ.ಕ. ಜಿ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್ ಹಕ್ಕು ಸಾಧಿಸುವಂತಿಲ್ಲ
Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.