B.C. Road: ಸಿಸಿ ಕೆಮರಾ ಮುಚ್ಚಿ ಹೊಟೇಲ್ಗೆ ನುಗ್ಗಿದ ಕಳ್ಳರು
Team Udayavani, Dec 26, 2023, 12:31 AM IST
ಬಂಟ್ವಾಳ: ಬಿ.ಸಿ. ರೋಡಿನಲ್ಲಿ ಸಿಸಿ ಕ್ಯಾಮರಾವನ್ನು ಮುಚ್ಚಿ ಹೊಟೇಲೊಂದಕ್ಕೆ ನುಗ್ಗಿದ್ದ ಕಳ್ಳರು ಸುಮಾರು 70 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಬಿ.ಸಿ.ರೋಡಿನ ಮುಖ್ಯರಸ್ತೆಯ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾರ್ಯಾಚರಿಸುತ್ತಿರುವ ಹೊಟೇಲ್ಗೆ ಕಳ್ಳರು ನುಗ್ಗಿದ್ದು, ಮುಸುಕುಧಾರಿ ಕಳ್ಳ ಹೋಟೇಲ್ನ ಬೀಗ ಮುರಿಯುವ ದೃಶ್ಯ ಕೆಮರಾದಲ್ಲಿ ಸೆರೆಯಾಗಿದೆ. ಆದರೆ ಆ ಬಳಿಕ ಕ್ಯಾಮರಾವನ್ನು ಅಡ್ಡಲಾಗಿ ಮುಚ್ಚಲಾಗಿದೆ. ಹೊಟೇಲ್ನ ಶಟರ್ನ ಬೀಗ ಮುರಿದು ಒಳ್ಳ ನುಗ್ಗಿ ಡ್ರಾಯರ್ನಲ್ಲಿದ್ದ ನಗದನ್ನು ಕಳವು ಮಾಡಲಾಗಿದೆ. ಜತೆಗೆ ಅದೇ ಕಟ್ಟಡದ ಮೆಡಿಕಲ್ ಗೂ ನುಗ್ಗಿದ್ದಾರೆ ಎನ್ನಲಾಗಿದೆ.
ಬಿ.ಸಿ.ರೋಡಿನಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ 10 ದಿನಗಳ ಹಿಂದೆ ಕೈಕಂಬದಲ್ಲಿ ಇದೇ ರೀತಿ ನಾಲ್ಕೈದು ಅಂಗಡಿಗಳಿಂದ ನಗದು ಕಳವು ಮಾಡಲಾಗಿತ್ತು. ಜತೆಗೆ ಅಜ್ಜಿಬೆಟ್ಟಿನಲ್ಲಿ ಮಹಿಳೆಯ ಸರ ಎಳೆದು ಪರಾರಿಯಾಗಿದ್ದು, ಈ ಪ್ರಕರಣದ ಕಳ್ಳರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.