ಬಿ. ಮಂಜುನಾಥ ಪೈ ಅವರ105ನೇ ಜನ್ಮ ದಿನಾಚರಣೆ
Team Udayavani, Feb 9, 2018, 11:31 AM IST
ಮಂಗಳೂರು: ಮಂಗಳೂರಿನ 30 ಮಾರ್ಕಿನ ಬೀಡಿ ತಯಾರಕರಾದ ಮೆ| ಭಾರತ್ ಬೀಡಿ ವರ್ಕ್ಸ್ ಪ್ರೈ.ಲಿ.ಯ ಸ್ಥಾಪಕ ಬಿ. ಮಂಜುನಾಥ ಪೈ ಅವರ 105ನೇ ಜನ್ಮ ದಿನವನ್ನು ಕದ್ರಿಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿವಾನಂದ ಪೈ ಅವರು ಪ್ರಸ್ತಾವನೆಗೈದು, ಸಂಸ್ಥೆ ಹಾಗೂ ಸಂಸ್ಥೆಯ ಸ್ಥಾಪಕ ಬಿ. ಮಂಜುನಾಥ ಪೈ ಅವರ ಬಗ್ಗೆ ವಿವರಿಸಿದರು.
ಸಂಸ್ಥೆಯ ನಿರ್ದೇಶಕ ಅನಂತ್ ಜಿ. ಪೈಯವರು ಸಂಸ್ಥೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಮರ್ಪಿಸಿ, ಬೀಡಿ ಉದ್ಯಮದ ಇಂದಿನ ಆಗುಹೋಗುಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಪಾಲಕ ನಿರ್ದೇಶಕರಾದ ಬ್ರಾಯ ಎಂ. ಪೈ, ನಾಗೇಂದ್ರ ಡಿ. ಪೈ, ಆನಂದ್ ಜಿ. ಪೈ, ವೆಂಕಟೇಶ್ ಎಂ. ಪೈ, ಕಾರ್ಪೊರೇಶನ್ ಬ್ಯಾಂಕಿನ ವಿಭಾಗೀಯ ವ್ಯವಸ್ಥಾಪಕ ಎ.ಕೆ. ವಿನೋದ್, ಸಿಂಡಿಕೇಟ್ ಬ್ಯಾಂಕಿನ ಉಪ ಮಹಾಪ್ರಬಂಧಕ ಸೋಮಯಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಮತ್ತೋರ್ವ ನಿರ್ದೇಶಕರಾದ ಸುಧೀರ್ ಎಂ. ಪೈ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.