Mangaluru ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ
Team Udayavani, Sep 24, 2023, 11:29 PM IST
ಮಂಗಳೂರು: ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು. ಜತೆಗೆ ವಿದ್ಯಾರ್ಥಿಗಳ ಬ್ಯಾಗ್ ತೂಕವನ್ನು ಈಗ ಇರುವ ಭಾರಕ್ಕಿಂತ ಮೂರನೇ ಒಂದರಷ್ಟು ಕಡಿಮೆ ಮಾಡಲು ಚಿಂತಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವ ಅಭ್ಯಾಸವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬದಲು ಎಸ್‌ಇಪಿ ಜಾರಿಗೊಳಿಸಲಾಗುತ್ತಿದೆ ಎಂದರು.
2 ಸಾವಿರ ಕೆಪಿಎಸ್ ಆರಂಭ
ಪ್ರಸ್ತುತ ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್)ಗಳಿದ್ದು, ಅವು ಗಳನ್ನು 2 ಸಾವಿರಕ್ಕೆ ಏರಿಸಲಾಗುವುದು. ಪ್ರತೀ 2-3 ಗ್ರಾಪಂಗಳಿಗೆ ಒಂದು ಶಾಲೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಆರಂಭದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಿಂದ 3ರಷ್ಟು ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ವರ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ 3 ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಕಟ್ಟಿ, ಉತ್ತೀರ್ಣರಾಗಿ ಶಿಕ್ಷಣವನ್ನು ಮುಂದುವರಿಸಲು ಅನುಕೂಲವಾಗಿದೆ.
ಇದನ್ನು 10ನೇ ತರಗತಿಗೂ ವಿಸ್ತರಿಸಲಾಗು ತ್ತದೆ. ಈ ವರ್ಷ ಬೋರ್ಡ್ ಪರೀಕ್ಷೆ ಬರೆದ 1.30 ಲಕ್ಷ ವಿದ್ಯಾರ್ಥಿಗಳ ಪೈಕಿ 42 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ಹೇಳಿದರು.
ಸಪ್ಲಿಮೆಂಟರಿ (ಬೋರ್ಡ್) ಪರೀಕ್ಷೆ ಬರೆದು ಕಾಲೇಜು ಸೇರುವವರಿಗೆ ಬ್ರಿಜ್ ಕೋರ್ಸ್ ನೀಡುವಂತೆ ಉನ್ನತ ಶಿಕ್ಷಣ ಸಚಿವ ರಲ್ಲಿ ಕೋರಲಾಗಿದೆ ಎಂದರು.
ಪ್ರಣವಾನಂದ ಸ್ವಾಮೀಜಿ ಈಡಿಗ ಸಮುದಾಯದ ನಾಯಕ ಅಲ್ಲ. ಅವರದ್ದು ಹಿನ್ನೆಲೆಯನ್ನು ತಿಳಿದುಕೊಳ್ಳಿ. ಹಿಂದುಳಿವ ವರ್ಗದ ಬಗ್ಗೆ ಕಾಳಜಿ ಅವರೊಬ್ಬರಿಗೇ ಇರುವುದಲ್ಲ. ಕಾಳಜಿ ಇರುವವರು ಸಾಕಷ್ಟು ಮಂದಿ ಇದ್ದಾರೆ ಎಂದು ಮಧು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಡಿಸಿಸಿ ಹರೀಶ್ ಕುಮಾರ್, ಪಕ್ಷದ ಪ್ರಮುಖ ರಾದ ಬಿ. ಇಬ್ರಾಹಿಂ, ಅಭಯಚಂದ್ರ, ಜೆ.ಆರ್. ಲೋಬೊ, ಐವನ್ ಡಿ’ಸೋಜಾ, ಕೋಡಿಜಾಲ್ ಇಬ್ರಾಹಿಂ, ಪದ್ಮರಾಜ್ ಆರ್., ಎಂ.ಶಶಿಧರ ಹೆಗ್ಡೆ, ಕೃಪಾ ಆಳ್ವ, ಇನಾಯತ್ ಆಲಿ, ಶಾಲೆಟ್ ಪಿಂಟೋ, ಮಮತಾ ಗಟ್ಟಿ, ಪ್ರತಿಭಾ ಕುಳಾç ಮೊದಲಾದವರು ಉಪಸ್ಥಿತರಿದ್ದರು.
ದ.ಕ. ಲೋಕಸಭೆ ಕ್ಷೇತ್ರವೂ ಕಾಂಗ್ರೆಸ್‌ಗೆ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯನ್ನು ಗೆಲ್ಲಿಸುವ ಸವಾಲು ತೆಗೆದುಕೊಳ್ಳಲಿದ್ದೇವೆ. ಬಿಜೆಪಿಯವರು ಇಲ್ಲಿಯವರೆಗೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಗೆಲ್ಲುತ್ತಿದ್ದರು. ಮುಂದೆ ಅದರಿಂದಲೇ ಸೋಲನುಭವಿಸಲಿದ್ದಾರೆ. 2004ರ ಹಿಂದಿನ ಸ್ಥಿತಿ ಮತ್ತೆ ದ.ಕ. ಜಿಲ್ಲೆಯಲ್ಲಿ ಮರುಕಳಿಸಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿ ಮುಂಬರುವ ಲೋಕಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ವರದಿ ನೀಡಲು ವೀಕ್ಷಕರಿಗೆ 15 ದಿನ ಸಮಯಾವಕಾಶ ನೀಡಲಾಗಿದೆ ಎಂದು ಲೋಕಸಭಾ ಚುನಾವಣೆಯ ದ.ಕ. ಜಿಲ್ಲಾ ವೀಕ್ಷಕ-ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಬಿಜೆಪಿ ಜತೆ ಮೈತ್ರಿಗೆ ಮೊದಲು ಜೆಡಿಎಸ್‌ನವರು ಕಾಂಗ್ರೆಸ್ ಕೋಮುವಾದಿ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಕತೆ ಏನಾಯ್ತು? ದ.ಕ. ಸೇರಿದಂತೆ ಜೆಡಿಎಸ್‌ನ ರಾಜ್ಯ ಮಟ್ಟದ ಅನೇಕ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.