ಬಜಪೆ: ಮೀನು ಫ್ಯಾಕ್ಟರಿಯಲ್ಲಿ ದುರಂತ : ಮೃತರ ಸಂಖ್ಯೆ 5 ಕ್ಕೇರಿಕೆ, ನಾಲ್ವರು ವಶಕ್ಕೆ
Team Udayavani, Apr 18, 2022, 11:13 AM IST
ಬಜಪೆ: ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಆದ ವಿಷಾನಿಲ ಸೋರಿಕೆ ದುರಂತದಲ್ಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮತ್ತಿಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 5 ಕ್ಕೇರಿದೆ.
ಮೀನು ಸಂಸ್ಕರಣಾ ಕಂಪೆನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮೂರು ಜನ ನಿನ್ನೆ ರಾತ್ರಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿ ಅಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಮಿರಾಜುಲ್ ಇಸ್ಲಾಂ ,ಶರಾಫತ್ ಆಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ದುರಂತದಲ್ಲಿ ಇದುವರೆಗೆ 5 ಮಂದಿ ಸಾವನ್ನಪ್ಪಿದ್ದು, ಹಸನ್ ಆಲಿ , ಮೊಹಮ್ಮದ್ ಕರೀಬುಲ್ಲಾ , ಹಫೀಜುಲ್ಲಾ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಂಪೆನಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್ ,ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ,ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಅನ್ನು ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.
ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು,ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪೊಲೀಸರು ಕಂಪೆನಿಗೆ ಬೀಗ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.