ಬಜಪೆ: ತಾಲೂಕಿನ ಪ್ರಥಮ ಕಟ್ಟಡ ಉದ್ಘಾಟನೆಗೆ ಸಜ್ಜು 

Team Udayavani, Nov 26, 2018, 10:09 AM IST

26-november-2.gif

ಬಜಪೆ : ‘ಸಂಜೀವಿನಿ’ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮಂಗಳೂರು ತಾಲೂಕಿನ ಪ್ರಥಮ ಕಟ್ಟಡ ಬಜಪೆಯಲ್ಲಿ ನಿರ್ಮಾಣವಾಗಿದ್ದು ಉದ್ಘಾಟನೆಗೆ ಸಜ್ಜಾಗಿದೆ. ನರೇಗಾ ಯೋಜನೆಯಡಿಯಲ್ಲಿ 13.75 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಈ ಕಟ್ಟಡ ಬಜಪೆ ಗ್ರಾಮ ಪಂಚಾಯತ್‌ನ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಸಮೀಪದಲ್ಲಿ ನಿರ್ಮಾಣ ಮಾಡಲಾಗಿದೆ.

ನರೇಗಾ ಯೋಜನೆಯಡಿ ಕಟ್ಟಡ ನಿರ್ಮಾಣ
ಈ ಕಟ್ಟಡ 2016ರಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡುವ ಅವಕಾಶದ ಬಗ್ಗೆ ಸರಕಾರದಿಂದ ಆದೇಶ ಬಂದಿತ್ತು. ಆ ಬಳಿಕ 2017ರಲ್ಲಿ ಅಂದಾಜು ಪಟ್ಟಿ ತಯಾರಿಗೆ ಆದೇಶ ನೀಡಿತು. ಬಜಪೆ ಗ್ರಾಮ ಪಂಚಾಯತ್‌ ನರೇಗಾ ಯೋಜನೆಯಡಿಯಲ್ಲಿ ಕ್ರಿಯಾ ಯೋಜನೆ ತಯಾರಿಸಿ, ಅನುಮೋದನೆ ಮಾಡಿ ಜನವರಿ 2018ರಲ್ಲಿ ನಿರ್ಮಾಣ ಕಾಮಗಾರಿ ಶುರು ಮಾಡಿತ್ತು. 10 ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಮಂಗಳೂರು ತಾಲೂಕಿನಲ್ಲಿಯೇ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಪ್ರಥಮ ಸಂಜೀವಿನಿ ಕಟ್ಟಡ ಇದಾಗಿದೆ.

ಏನೇನಿವೆ
ಇದು ಸುಮಾರು 1,500 ಚ.ಅಡಿ. ವಿಸ್ತೀರ್ಣವುಳ್ಳ ಆರ್‌ಸಿಸಿ ಕಟ್ಟಡ. ಒಂದು ಹಾಲ್‌ ಎರಡು ಕೋಣೆ, ಸ್ನಾನ ಗೃಹ ಹಾಗೂ ಶೌಚಾಲಯದ ವ್ಯವಸ್ಥೆಗಳನ್ನು ಒಳಗೊಂಡಿದೆ.

ಅಭಿಯಾನದ ಗುರಿ
ಲಾಭದಾಯಕ ಆದಾಯವನ್ನು ಒದಗಿಸುವುದರ ಮೂಲಕ ಬಡತನ ಪ್ರಮಾಣವನ್ನು ಕಡಿಮೆಗೊಳಿಸುವುದು ಮತ್ತು ಸಮುದಾಯ ಸಂಸ್ಥೆಗಳ ಮೂಲಕ ಸ್ವ-ಉದ್ಯೋಗ ಅವಕಾಶಗಳನ್ನು ಕಲ್ಪಿಸುವುದರಿಂದಾಗಿ ಗ್ರಾಮೀಣ  ಜನರ ಜೀವನಮಟ್ಟದಲ್ಲಿ ಸಮರ್ಥನೀಯವಾದ ಅಭಿವೃದ್ಧಿಯನ್ನು ಕಾಣಬಹುದಾಗಿದೆ ಎಂಬ ಗುರಿಯೊಂದಿಗೆ ಇದನ್ನು ಆರಂಭಿಸಲಾಗಿದೆ.

ಉದ್ದೇಶ
ಗ್ರಾಮೀಣಾಭಿವೃದ್ಧಿ ಮಂತ್ರಾಲಯ ರೂಪಿಸಿದ್ದ ಸ್ವರ್ಣ ಜಯಂತಿ ಗ್ರಾಮ ಸ್ವರೋಜ್‌ಗಾರ್‌ ಯೋಜನೆಯನ್ನು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಆಜೀವಿಕಾ) ಎಂದು ಪುನರ್‌ ರಚನೆ ಮಾಡಲಾಗಿದೆ. ಗ್ರಾಮೀಣ ಬಡತನದ ಮಟ್ಟವನ್ನು ಕಡಿಮೆ ಮಾಡುವ ಉದ್ದೇಶದಿಂದ ಸೃಷ್ಟಿ ಮತ್ತು ಸಾಂಸ್ಥಿಕ ವೇದಿಕೆಯನ್ನು ಬಲಪಡಿಸುವ ಮೂಲಕ ರಾಜ್ಯಾದ್ಯಂತ ‘ಸಂಜೀವಿನಿ’ಯನ್ನು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ (ಕೆಎಸ್‌ಆರ್‌ಎಲ್‌ಪಿಎಸ್‌) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದೆ.

ಯೋಜನೆಯ ವಿವರ
.ಫಲಾನುಭವಿಗಳು -ಬಿಪಿಎಲ್‌ ಕುಟುಂಬದ ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರು ಪಂಚ ಸೂತ್ರಗಳ ಅನುಸರಣೆ-ನಿರಂತರ ಸಭೆ, ಉಳಿತಾಯ, ಆಂತರಿಕ ಸಾಲ, ಮರುಪಾವತಿ ಮತ್ತು ಲೆಕ್ಕಪತ್ರ ನಿರ್ವಹಣೆ.
.ಅಸಂಘಟಿತ ಮಹಿಳೆಯರನ್ನು ಸಂಘಟಿಸಿ ಹೊಸ ಗುಂಪುಗಳ ರಚನೆ.
. ವಿವಿಧ ಹಂತಗಳಲ್ಲಿ ಒಕ್ಕೂಟಗಳ ನಿರ್ಮಾಣ. 
. ಆರ್ಥಿಕ ಸೇರ್ಪಡೆ

ಸಶಕ್ತೀಕರಿಸುವ ದೃಷ್ಟಿಯಿಂದ ನಿರ್ಮಾಣ
ಗ್ರಾಮದ ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳ ಆರ್ಥಿಕ ಸಶಕ್ತೀಕರಣ ಮಾಡುವ ದೃಷ್ಟಿಯಿಂದ ಪಂಚಾಯತ್‌ ಇದನ್ನು ನಿರ್ಮಾಣ ಮಾಡಿದೆ. ಸ್ವಸಹಾಯ ಸಂಘಗಳ ಗುಂಪುಗಳ ಸಭೆ, ಚಟುವಟಿಕೆ, ಉತ್ಪನ್ನಗಳ ಮಾರಾಟ ಮಾಡಲು ಈ ಕಟ್ಟಡದಲ್ಲಿ ಅವಕಾಶವನ್ನು ಕಲ್ಪಿಸಲಾಗುತ್ತದೆ. ಸರಕಾರದಿಂದ ಬಂದ ಅನುದಾನ, ಯೋಜನೆಯನ್ನು ಪಂಚಾಯತ್‌ ಸಮರ್ಪಕವಾಗಿ ಬಳಸಿ ಪಂಚಾಯತ್‌ನ ಒಂದು ಆಸ್ತಿಯನ್ನಾಗಿ ಮಾಡಿದೆ.
– ಸಾಯೀಶ್‌ ಚೌಟ,
ಪಿಡಿಒ, ಬಜಪೆ ಗ್ರಾ.ಪಂ.

ಟಾಪ್ ನ್ಯೂಸ್

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.