ಕೊಲೆ ಪ್ರಕರಣದ ಹಿಂದಿರುವ ಸಂಘಟನೆಗಳನ್ನು ಮಟ್ಟ ಹಾಕಿ: ಯು.ಟಿ.ಖಾದರ್ ಆಗ್ರಹ
Team Udayavani, Jul 29, 2022, 2:28 PM IST
ಸುರತ್ಕಲ್: ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು, ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಬಗ್ಗೆ ಸಮರ್ಥ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ವಿಧಾನ ಸಭಾ ಪ್ರತಿಪಕ್ಷ ದ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವ ಸಂಘಟನೆಗಳು ಕುಮ್ಮಕ್ಕು ನೀಡಿದೆಯೋ ಅವುಗಳನ್ನು ಮಟ್ಟ ಹಾಕುವ ಕೆಲಸವನ್ಬು ಪೊಲೀಸ್ ಇಲಾಖೆ ಹಾಗೂ ಸರಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ನಮಗೆ ಎಲ್ಲ ಜನರ ಜೀವವೂ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ
ಸರಕಾರ ಈ ರೀತಿ ಮತಾಂಧ ಶಕ್ತಿಗಳಿಂದ ಹತ್ಯೆಗೀಡಾದವರಿಗೆ ಪರಿಹಾರ ನೀಡುವುದು ತೆರಿಗೆ ದುಡ್ಡಿನಿಂದ. ಹಾಗಾಗಿ ಹತ್ಯೆಗೀಡಾದ ಎಲ್ಲ ಮೂವರ ಹೆತ್ತವರ ನೋವನ್ನು ಸಮಾನವಾಗಿ ಪರಿಗಣಿಸಿ ಪಕ್ಷಪಾತವಿಲ್ಲದೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.