ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ ವಂಚನೆ: ಓರ್ವನ ಬಂಧನ
Team Udayavani, Jul 22, 2019, 9:58 AM IST
ಪುತ್ತೂರು: ಬ್ಯಾಂಕಿನಲ್ಲಿ ಚಿನ್ನದ ಲೇಪನ ಮಾಡಿದ ಆಭರಣವನ್ನು ಅಡವಿಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಲಾಡು ಗ್ರಾಮದ ಬಂಗಾರಡ್ಕ ನಿವಾಸಿ ಗಣೇಶ್ ಆಚಾರ್ಯ ಎಂಬಾತನನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕೊಂದರ ನಿತ್ಯ ಠೇವಣಿ ಸಂಗ್ರಾಹಕನಾಗಿರುವ ಗಣೇಶ್ ಆಚಾರ್ಯ ನಗರದ ಫೆಡರಲ್ ಬ್ಯಾಂಕಿನಲ್ಲಿ ಅಡಮಾನದ ಸಾಲ ಪಡೆದುಕೊಂಡಿದ್ದರು. ಇತ್ತೀಚೆಗೆ ಅಡವಿಟ್ಟ ಆಭರಣಕ್ಕೆ ಸಂಬಂಧಿಸಿ ಹಣ ಮರುಪಾವತಿ ತಡವಾಗು ತ್ತಿರುವುದರಿಂದ ಅನುಮಾನಗೊಂಡ ಬ್ಯಾಂಕ್ ಸಿಬಂದಿ ಆಭರಣವನ್ನು ಮರು ಪರಿಶೀಲನೆ ನಡೆಸಿದಾಗ ಅದು ನಕಲಿಯಾಗಿದ್ದುದು ಪತ್ತೆಯಾಗಿದೆ.
ಬ್ಯಾಂಕ್ ಮ್ಯಾನೇಜರ್ ತರುಣ್ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.