ಬ್ಯಾಂಕ್ ಕ್ಯಾಶ್‌ಕೌಂಟರ್‌ನಲ್ಲಿ ಬೆಂಕಿ ಆಕಸ್ಮಿಕ
Team Udayavani, Apr 15, 2017, 2:02 PM IST
ಮಂಗಳೂರು: ನಗರದ ಎಂ.ಜಿ .ರಸ್ತೆಯಲ್ಲಿರುವ ಕಾರ್ಪೊರೇಶನ್ ಬ್ಯಾಂಕ್ ಶಾಖೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣಗೊಂಡಿತು. ಘಟನೆಯಲ್ಲಿ ಕ್ಯಾಶ್ ಕೌಂಟರ್‌ನಲ್ಲಿ ನೋಟು ಲೆಕ್ಕಮಾಡುವ ಯಂತ್ರ ಹಾಗೂ ಫ್ಯಾನ್ ಸುಟ್ಟು ಹೋಗಿದ್ದು ಅಗ್ನಿ ಶಾಮಕದಳ ಸಿಬಂದಿ ತತ್‌ಕ್ಷಣ ಸ್ಥಳಕ್ಕೆ ಆಗಮಿಸಿ ನಡೆಸಿದ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಶುಕ್ರವಾರ ಬ್ಯಾಂಕ್‌ಗೆ ರಜೆ ಇದ್ದರೂ ಆಡಿಟ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಖಾ ಪ್ರಬಂಧಕರು ಹಾಗೂ ಆಡಿಟ್ ಮಾಡುವವರು ಬ್ಯಾಂಕ್‌ನಲ್ಲಿದ್ದರು. ಸಂಜೆ ಸುಮಾರು 5.15ರ ವೇಳೆಗೆ ಕ್ಯಾಶ್ ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಗಮನಿಸಿದ ಶಾಖಾ ಪ್ರಬಂಧಕರು ಕೂಡಲೇ ಪಾಂಡೇಶ್ವರ ಅಗ್ನಿ ಶಾಮಕದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ಇದಲ್ಲದೆ ಕದ್ರಿ ಪೊಲೀಸ್ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದರು.
ರಜೆಯ ದಿನವಾದ ಕಾರಣ ಕ್ಯಾಶ್‌ಕೌಂಟರ್ ಮುಚ್ಚಿದ್ದು ನಗದು ಇರಲಿಲ್ಲ. ಶಾರ್ಟ್ ಸರ್ಕ್ನೂಟ್ ಉಂಟಾಗಿ ನೋಟು ಎಣಿಸುವ ಯಂತ್ರಕ್ಕೆ ಬೆಂಕಿ ಹತ್ತಿಕೊಂಡು ಬಳಿಕ ಮೇಲ್ಗಡೆ ಇದ್ದ ಫ್ಯಾನ್‌ಗೆ ಹರಡಿದೆ. ಎಸಿಪಿ ಹಾಗೂ ಕದ್ರಿ ಪೊಲೀಸರು ಕಾರ್ಯಾಚರಣೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.