ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ಕದ್ರಿ ದೇವಸ್ಥಾನದಲ್ಲಿ ಅಳವಡಿಸಿದ್ದ ಬ್ಯಾನರ್ ತೆರವು
Team Udayavani, Jan 20, 2023, 5:45 AM IST
ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಿದ ಬ್ಯಾನರನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.
ಜ. 15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್ ಕಂಡು ಬಂದಿದೆ. ಅದರಲ್ಲಿ ಕುಕ್ಕರ್ ಬಾಂಬ್ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಮ್ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬರೆಯಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರುವುದರಿಂದ ಆಡಳಿತ ಮಂಡಳಿ ಈ ಬ್ಯಾನರ್ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್ ತೆರವುಗೊಳಿಸಿದ್ದಾರೆ. ಈ ಕುರಿತಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.