Dakshina Kannada ಜಿಲ್ಲೆಗೆ ಬಂಟರ ಕೊಡುಗೆ ಅಮೂಲ್ಯ: ಸಚಿವ ಗುಂಡೂ ರಾವ್‌

ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮ

Team Udayavani, Sep 21, 2023, 12:10 AM IST

ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ಅಮೂಲ್ಯ: ಸಚಿವ ಗುಂಡೂ ರಾವ್‌

ಮಂಗಳೂರು: ಬಂಟರಲ್ಲಿ ನಾಯಕತ್ವದ ಗುಣಗಳಿವೆ. ವೈದ್ಯಕೀಯ, ಕ್ರೀಡೆ, ಸಾಂಸ್ಕೃತಿಕ, ಹೊಟೇಲ್‌, ಉದ್ಯಮ ಸಹಿತ ಎಲ್ಲ ಕ್ಷೇತ್ರಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲಿ ಇಂದು ಬಂಟರು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ಅಮೂಲ್ಯವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಹೇಳಿದರು.

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಆಯೋಜಿಸಲಾದ ಧಾರ್ಮಿಕಸಭೆಯಲ್ಲಿ ಅವರು ಮಾತಾಡಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮಾತನಾಡಿ, ಬಂಟರು, ನಾಡವರು ಅಂದರೆ ಶಕ್ತಿವಂತರು. ನಾಯಕತ್ವ ಗುಣಗಳಿಗೆ ಹೆಸರಾದ ಬಂಟರು ಸಮಾಜದಲ್ಲಿ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಯಲ್ಲಿ ತರುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯ ಎಂದರು.

ಹೇರಂಭ ಇಂಡಸ್ಟ್ರೀಸ್‌ ಆಡಳಿತ ನಿರ್ದೇಶಕ ಸದಾಶಿವ ಶೆಟ್ಟಿ ಕನ್ಯಾನ ಮಾತನಾಡಿ, ನಾನು ಕೂಡ ಬಂಟರ ಸಂಘದ ನೆರವಿನಿಂದ ಶಿಕ್ಷಣ ಪಡೆದು ಈ ಮಟ್ಟಕ್ಕೆ ಏರಿದ್ದೇನೆ. ಶಿಕ್ಷಣದ ಮಹತ್ವವನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಶಿಕ್ಷಣದಿಂದ ಪ್ರಗತಿ ಸಾಧ್ಯ ಎಂದರು.

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ, ಬ್ಯಾಂಕ್‌ ಆಫ್‌ ಬರೋಡ ವಲಯ ಮುಖ್ಯಸ್ಥೆ ಗಾಯತ್ರಿ ಆರ್‌., ಮುಂಬಯಿ ಉದ್ಯಮಿ ಕೆ.ಕೆ. ಶೆಟ್ಟಿ ಕಾಸರಗೋಡು, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಮುರಳೀಧರ ಹೆಗ್ಡೆ, ಉಚ್ಚಿಲ ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಸಿ.ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್‌ ಆರ್‌., ಲಯನ್ಸ್‌ ಗವರ್ನರ್‌ ಮೆಲ್ವಿನ್‌ ಡಿ’ಸೋಜಾ, ದ.ಕ. ಜಿಲ್ಲಾ ಸಂಚಾಲಕ ಬಿ. ನಾಗರಾಜ್‌ ಶೆಟ್ಟಿ, ಕಾಸರಗೋಡು ಜಿಲ್ಲಾ ಸಂಚಾಲಕ ಸಂಜೀವ ಶೆಟ್ಟಿ, ಬಂಟರ ಮಾತೃ ಸಂಘದ ಪ್ರದಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿ.ಎ. ರಾಮ ಮೋಹನ್‌ ರೈ, ಸಂಜೀವ ಶೆಟ್ಟಿ ಸಂಪಿಗೆ ಅಡಿ ಮುಂತಾದವರು ಉಪಸ್ಥಿತರಿದ್ದರು.

ವೈದ್ಯಕೀಯ ಕ್ಷೇತ್ರದ ಸಾಧಕಿ ಡಾ|ಅಮೃತ ಭಂಡಾರಿ, ಕಂಬಳ ಕ್ಷೇತ್ರದ ಸಾಧಕ ಕೊಳಚೂರು ಕೊಂಡೆಟ್ಟು ಸುಕುಮಾರ್‌ ಶೆಟ್ಟಿ, ಕೈಗಾರಿಕಾ ಕ್ಷೇತ್ರದ ಸಾಧಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರನ್ನು ಸಮ್ಮಾನಿಸಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮಾನಾಥ ಶೆಟ್ಟಿ ಪ್ರಸ್ತಾವಿಸಿದರು. ಆಶಾಜ್ಯೋತಿ ರೈ ವಂದಿಸಿದರು. ಮಂಜುಳಾ ಶೆಟ್ಟಿ, ಪ್ರಕಾಶ್‌ ಮೆಲಾಂಟ ನಿರೂಪಿಸಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.