ಬಂಟ್ವಾಳ: ಪರಿವರ್ತನೆಗಾಗಿ ನಮ್ಮ ನಡಿಗೆಗೆ ಚಾಲನೆ
Team Udayavani, Jan 15, 2018, 9:40 AM IST
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯು ಹಮ್ಮಿಕೊಂಡಿರುವ 13 ದಿನಗಳ “ಪರಿವರ್ತನೆಗಾಗಿ ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಕಾರ್ಯಕ್ರಮಕ್ಕೆ ರವಿವಾರ ಅರಳ ಗರುಡ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ದೀಪ ಬೆಳಗಿಸಿ, ಪಕ್ಷದ ಧ್ವಜವನ್ನು ಹಸ್ತಾಂತ ರಿಸುವ ಮೂಲಕ ಚಾಲನೆ ನೀಡಿದರು.
ಕಳೆದ ನಾಲ್ಕೂವರೆ ವರ್ಷಗಳ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯ ಬಗ್ಗೆ ಜನಜಾಗೃತಿ ಮೂಡಿ ಸುವ ಉದ್ದೇಶದಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಬಿಜೆಪಿ ನೇತಾರ ರಾಜೇಶ್ ನಾೖಕ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಹಸ್ರಾರು ಸಂಖ್ಯೆಯ ಕಾರ್ಯಕರ್ತ ರಿಂದ ಭಾರತ ಮಾತಾಕಿ ಜೈ ಜಯ ಘೋಷದೊಂದಿಗೆ ಆರಂಭವಾದ ಪಾದಯಾತ್ರೆ ಕುಟ್ಟಿಕಳ, ಇರ್ನಿ ಮೂಲಕ 8 ಕಿ.ಮೀ. ದೂರದ ಕಪೆìಗೆ ತಲುಪಿ ಅಲ್ಲಿ ಸಾರ್ವಜನಿಕ ಸಭೆ ನಡೆಯಿತು. ಬಳಿಕ ಪಕ್ಷ ಪ್ರಮುಖರು ಪಕ್ಷದ ಸ್ಥಳೀಯ ಕಾರ್ಯಕರ್ತರ ಮನೆಗಳಲ್ಲಿ ರಾತ್ರಿ ವಾಸ್ತವ್ಯ ಮಾಡಿದರು.
ಬಿಜೆಪಿಗೇ ಮತ – ಮನವಿ
ದಾರಿಯುದ್ದಕ್ಕೂ ಸಿಗುವ ಮನೆ ಮಂದಿಗೆ ನಾಯಕರ ಸಹಿತ ಕಾರ್ಯ ಕರ್ತರು ಮುಂದಿನ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು. ಬಿಜೆಪಿ ನೇತಾರ ರಾಜೇಶ್ ನಾೖಕ್ ಮಾತನಾಡಿ, ಮುಂದಿನ 13 ದಿನಗಳಲ್ಲೂ ಕ್ಷೇತ್ರದ ಕಾರ್ಯಕರ್ತ ಮನೆಗಳಲ್ಲಿ ಉಳಿದುಕೊಳ್ಳುವ ಮೂಲಕ ಯಾತ್ರೆಯಲ್ಲಿ ಸಂಪೂರ್ಣವಾಗಿ ಭಾಗವಹಿಸಿ ಸಮಾರೋಪದ ಬಳಿಕವೇ ಮನೆಗೆ ತೆರಳುತ್ತೇವೆ ಎಂದರು. ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.
ಬಿಜೆಪಿ ಶಾಂತಿಯ ಪ್ರತೀಕ
ದೇಶದ ಏಕತೆ, ಶಾಂತಿ, ಸೌಹಾರ್ದ ಕಾಪಾಡುವುದು ಬಿಜೆಪಿ ಆಡಳಿತದಲ್ಲಿ ಮಾತ್ರ ಸಾಧ್ಯ. ಬಿಜೆಪಿ ಶಾಂತಿಯ ಪ್ರತೀಕ. ಇಂದು ಜಿಲ್ಲೆಯಲ್ಲಿ ನಡೆಯು ತ್ತಿರುವ ಕೋಮು ಗಲಭೆಗಳ ಹಿಂದೆ ವ್ಯವಸ್ಥಿತ ಸಂಚಿದೆ. ಒಂದು ಕೋಮನ್ನು ಬೆಂಬಲಿಸಿ ಪ್ರಚೋದಿಸುವ ಮೂಲಕ ಜನಸಾಮಾನ್ಯರ, ಅಮಾಯಕರ ಜೀವ ಹರಣ ಮಾಡಲಾಗುತ್ತಿದೆ ಎಂದು ಹೇಳಿದ ರಾಜೇಶ್ ನಾೖಕ್, ಈ ಹಿಂದೆ ಬಂಟ್ವಾಳದಲ್ಲಿ ಬಿಜೆಪಿ ಶಾಸಕರು ಇದ್ದಾಗ ಯಾವುದೇ ಕೋಮು ಗಲಾಟೆಗೆ ಅವಕಾಶ ಆಗಿರಲಿಲ್ಲ ಎಂದು ಅವರು ಸ್ಮರಿಸಿಕೊಂಡರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ. ಕೆ. ಮೋನಪ್ಪ ಭಂಡಾರಿ ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಪಕ್ಷದ ನಾಯಕ ರಾದ ಸುಲೋಚನಾ ಜಿ.ಕೆ. ಭಟ್, ಕೆ. ಪದ್ಮನಾಭ ಕೊಟ್ಟಾರಿ, ಬೃಜೇಶ್ ಚೌಟ, ಉಮಾನಾಥ ಕೋಟ್ಯಾನ್, ಜಿ. ಆನಂದ, ಜಿತೇಂದ್ರ ಕೊಟ್ಟಾರಿ, ಸುಗುಣ ಕಿಣಿ, ಎಂ. ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕೆ. ಕಮಲಾಕ್ಷಿ ಪೂಜಾರಿ, ದಿನೇಶ್ ಅಮೂrರು, ಮೋನಪ್ಪ ದೇವಸ್ಯ, ರಾಮದಾಸ್ ಬಂಟ್ವಾಳ ನಾಗೇಶ್ ಮಾಣಾ, ತುಂಗಮ್ಮ, ರತ್ನ ಕುಮಾರ್ ಚೌಟ, ಜಗದೀಶ ಆಳ್ವ ಅಗ್ಗೊಂಡೆ, ಉಮೇಶ್ ಡಿ. ಅರಳ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.