Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು
Team Udayavani, May 20, 2024, 7:32 PM IST
ಬಂಟ್ವಾಳ: ಮಂಚಿಯಲ್ಲಿ ಅಪರಿಚಿತ ಕಾರೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ನಿವಾಸಿ ಸ್ಕೂಟರ್ ಸವಾರ ಚಿದಾನಂದ ಕಾಮತ್ (54) ಮೃತಪಟ್ಟ ವ್ಯಕ್ತಿ. ಮಂಚಿ ಸಮೀಪದ ಮೋಂತಿಮಾರ್ ಕಾಯರಪಡ್ಪು ಎಂಬಲ್ಲಿ ಘಟನೆ ನಡೆದಿದ್ದು, ಸಾಲೆತ್ತೂರುವಿನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಚಿದಾನಂದ ಕಾಮತ್ ಅವರಿಗೆ ಅಜಾಗರೂಕತೆಯಿಂದ ಮತ್ತು ಅತೀವೇಗದಿಂದ ಬಂದ ಅಪರಿಚಿತ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.