Bantwal: ಬಿಸಿರೋಡಿನ ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ; ದಟ್ಟ ಹೊಗೆ
Team Udayavani, Apr 6, 2023, 3:28 PM IST
ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು. ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.
ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.
ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.
ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.
ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.