ಬಂಟ್ವಾಳ: ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಆರೋಪಿ ಬಂಧನ
Team Udayavani, Oct 19, 2022, 10:00 PM IST
ಬಂಟ್ವಾಳ: ಸುಮಾರು 15 ವರ್ಷಗಳ ಹಿಂದೆ ಬಿ.ಸಿ. ರೋಡಿನಲ್ಲಿ ವ್ಯಕ್ತಿಯೊಬ್ಬರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬುಧವಾರ ಮಂಜೇಶ್ವರದ ಬಂದ್ಯೋಡಿನಲ್ಲಿ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕುಂಜತ್ತೂರು ಗ್ರಾಮದ ತುಮಿನಾಡು ನಿವಾಸಿ ಮಹಮ್ಮದ್ ಫಾರೂಕ್ ಬಂಧಿತ ಆರೋಪಿ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2007ರಲ್ಲಿ ಬಿ.ಸಿ. ರೋಡಿನಲ್ಲಿ ನಡೆದ ಕೋಮು ಗಲಭೆಯ ಸಂದರ್ಭ ಆರೋಪಿಯು ಇತರರ ಜತೆ ಸೇರಿ ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ್ದು, ಈ ಕುರಿತು ಫಾರೂಕ್ನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ಸುದೀರ್ಘ ಸಮಯದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಆರೋಪಿಯ ಕುರಿತು ಖಚಿತ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸರು ಬುಧವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ಮಂಜೇಶ್ವರದ ಬಂದ್ಯೋಡಿನಲ್ಲಿ ಬಂಧಿಸಿದ್ದಾರೆ. ನಗರ ಠಾಣೆಯ ಪ್ರೊಬೆಷನರಿ ಪಿಎಸ್ಐ ಧನರಾಜ್, ಹೆಡ್ಕಾನ್ಸ್ಟೆಬಲ್ ಗಣೇಶ್, ರಾಜೇಶ್, ಇರ್ಷಾದ್ ಅವರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.