ಬಂಟ್ವಾಳ: ಶ್ರೀಗಂಧ ಮರ ಕಡಿದು ಮಾರಾಟ ಹಾಗೂ ‘ಉಡ’ ಭಕ್ಷಣೆಗೆ ಯತ್ನ: ಆರೋಪಿಗಳ ಬಂಧನ
Team Udayavani, Jun 25, 2021, 12:34 PM IST
ಬಂಟ್ವಾಳ: ರಕ್ಷಿತಾ ಅರಣ್ಯವೊಂದರಿಂದ ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ ಕಡಿದು ಬಳಿಕ ಮಾರಾಟ ಮಾಡಲು ಯತ್ನಿಸಿದ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ಚಾಳ ವಲಯ ಆರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾತೂರು ನಿವಾಸಿ ಇಬ್ರಾಹಿಂ, ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು. ಕಾರ್ಯಚರಣೆ ವೇಳೆ ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಬ ರಕ್ಷಿತಾ ಅರಣ್ಯದಿಂದ ಆರೋಪಿಗಳು ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಡಿದು ತುಂಡು ಮಾಡಿ ಮಾರಟ ಮಾಡಲು ತಯಾರಿ ನಡೆಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಮಿಂಚಿನ ಕಾರ್ಯಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಾಜು ಮೂರು ಲಕ್ಷ ಮೌಲ್ಯದ ಗಂಧದ ಮರದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿದ ಸಂಧರ್ಭದಲ್ಲಿ ಆರೋಪಿಗಳು ಕಾಡು ಪ್ರಾಣಿಯಾದ ಉಡವೊಂದನ್ನು ಹಿಡಿದು ಪದಾರ್ಥ ಮಾಡಲು ತಯಾರಿ ನಡೆಸುತ್ತಿದ್ದು, ಅ ಪ್ರಾಣಿಯನ್ನು ಕೂಡ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಸ್ಪಷ್ಟವಾದ ಮಾಹಿತಿ ತನಿಖೆಯ ಬಳಿಕ ತಿಳಿಯಬೇಕಾಗಿದೆ.
ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!
ಆರೋಪಿಗಳ ಬಂಧಿಸಿದ ಅರಣ್ಯಾಧಿಕಾರಿಗಳು ವಿಚಾರಣೆ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಯಶೋಧರ, ಪ್ರೀತಮ್ ಎಸ್, ಬಸಪ್ಪ ಹಲಗಾರ್, ಅರಣ್ಯ ರಕ್ಷಕರಾದ ಜಿತೇಶ್, ಶೋಭಿತ್, ದಯಾನಂದ, ರವಿ, ರೇಖಾ, ಅರಣ್ಯ ವೀಕ್ಷಕರಾದ ಪ್ರವೀಣ್, ಚಾಲಕರಾದ ಜಯರಾಮ್ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.