Bantwala: ಕಚೇರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಅರಣ್ಯ ಇಲಾಖೆ ಸಿಬ್ಬಂದಿ
Team Udayavani, Nov 30, 2024, 1:47 PM IST
ಬಂಟ್ವಾಳ: ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ವೀರಕಂಬ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಕಚೇರಿಯಲ್ಲಿ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಕಿಟಕಿ ಬಾಗಿಲು ತೆರದು ನೋಡಿದಾಗ ಜಯರಾಮ ಅವರು ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.
ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ನೋಡಿದಾಗ ಇವರು ಅದಾಗಲೇ ಮೃತಪಟ್ಟಿದ್ದರು.
ಮೃತರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.