ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸನ್ನದ್ಧರಾಗಿ: ರಾಜಣ್ಣ
Team Udayavani, Feb 7, 2019, 6:39 AM IST
ಬಂಟ್ವಾಳ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಈಗಿಂದಲೇ ಸನ್ನದ್ಧ ರಾಗಿ ಕಾರ್ಯ ನಿರ್ವಹಿಸಿ. ಫೆಬ್ರವರಿ ತಿಂಗಳಾಂತ್ಯಕ್ಕೆ ತಾಲೂಕಿನ ಕೆಲವು ಭಾಗಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಮುಂಜಾಗೃತ ಕ್ರಮ ಅನುಸರಿಸುವ ಮೂಲಕ ಶಾಶ್ವತ ಪರಿಕಾರ ಕ್ರಮಕ್ಕೆ ಮುಂದಾಗಬೇಕು ಎಂದು ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರು ಅಧಿಕಾರಿ ವರ್ಗವನ್ನು ಎಚ್ಚರಿಸಿದರು.
ಫೆ. 5ರಂದು ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾಹಿತಿ ಹಂಚಿಕೊಂಡರು.
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಅಧ್ಯಕ್ಷತೆ ವಹಿಸಿ ಸಭೆ ಯನ್ನು ನಡೆಸಿಕೊಟ್ಟರು.
ಕುಡಿಯುವ ನೀರಿನ ಅಭಾವವಿರುವ ಗ್ರಾಮದಲ್ಲಿ ಜಿ.ಪಂ. ಅನುದಾನ ಬಳಸಿ ಹೊಸ ಕೊಳವೆ ಬಾವಿಯನ್ನು ನಿರ್ಮಿಸಿ. ಪಾಳುಬಿದ್ದ ಕೊಳವೆ ಬಾವಿಯನ್ನು ನವೀಕರಿಸುವ ಅಥವಾ ಇನ್ನೊಂದು ಕಡೆ ಜೋಡಿಸುವ ಕಾಮಗಾರಿಯನ್ನು ನಡೆಸುವುದಕ್ಕೂ ಅವಕಾಶವಿದೆ. ಸಮಸ್ಯೆ ಎದುರಾದರೆ ಅದಕ್ಕೆ ಸೂಕ್ತ ಪರಿಹಾರ ಏನೆಂಬುದನ್ನು ಅಧಿಕಾರಿಗಳು ಮೊದಲಾಗಿ ಚಿಂತಿಸ ಬೇಕಾಗಿದೆ. ಕೊನೆಯ ಹಂತದಲ್ಲಿ ನಡೆಸುವ ಕೆಲಸ ಗುರಿ ಮುಟ್ಟುವುದಕ್ಕೆ ವಿಫಲ ಆಗುವುದಾಗಿ ಸೂಚಿಸಿದರು.
ಎಲ್‌ಪಿಜಿ ಸೌಲಭ್ಯ
ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಮಾಹಿತಿ ನೀಡಿ, ಅರಣ್ಯ ಇಲಾಖೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಎಸ್ಸಿ, ಎಸ್ಟಿ ಹಾಗೂ ಅರಣ್ಯ ಪ್ರದೇಶದ ನಿವಾಸಿಗಳಿಗೆ ಎಲ್‌ಪಿಜಿ ಸೌಲಭ್ಯವಿದ್ದು, ಈ ಬಗ್ಗೆ 50 ಗ್ರಾಮಗಳಿಗೆ ಅರ್ಜಿ ಸಹಿತ ಮಾಹಿತಿ ನೀಡಲಾಗಿದೆ. ಆದರೆ, 4 ಗ್ರಾಮಗಳ 17 ಅರ್ಜಿಗಳು ಮಾತ್ರ ಬಂದಿವೆ ಎಂದು ತಿಳಿಸಿದರು.
ಅರಣ್ಯ ಪ್ರದೇಶದಲ್ಲಿರುವ ಗ್ರಾಮಗಳಿಗೆ ಎಸ್ಸಿ, ಎಸ್ಟಿ ಗ್ಯಾಸ್ ಯೋಜನೆಯ ಫಲಾನು ಭವಿಗಳ ಆಯ್ಕೆಯ ಬಗ್ಗೆ ಅಧ್ಯಕ್ಷರಿಗೆ ಜವಾಬ್ದಾರಿ ನೀಡಿ, ಮತ್ತೂಮ್ಮೆ ಪರಿಶೀಲನೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಲಾಯಿತು.
ಸಭೆಯಲ್ಲಿ ನೂತನ ಬಂಟ್ವಾಳ ತಹಶೀಲ್ದಾರ್ ರಶ್ಮಿ ಕಿಶೋರ್ ಸಲಹೆ ನೀಡಿದರು. ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ ಉಪಸ್ಥಿತರಿದ್ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.
ಮಂಗನ ಕಾಯಿಲೆ: ಮುಂಜಾಗ್ರತ ಕ್ರಮ
ತಾಲೂಕು ಆರೋಗ್ಯ ಅಧಿಕಾರಿ ಡಾ| ದೀಪಾ ಪ್ರಭು ಮಾತನಾಡಿ, ಬಂಟ್ವಾಳದಲ್ಲಿ ಮಂಗನ ಸಾವು, ಕಾಯಿಲೆ ಪ್ರಕರಣಗಳು ಇದುವರೆಗೆ ಪತ್ತೆಯಾಗಿಲ್ಲ. ಈ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿ ಅರಣ್ಯ, ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ನಿರಂತರವಾಗಿ ಜಾಗೃತಿ ಕಾರ್ಯಾಗಾರ ನಡೆಯುತ್ತಿದೆ ಎಂದು ತಿಳಿಸಿದರು. ಮುಂಜಾಗೃತ ಕ್ರಮವಾಗಿ ಅರಣ್ಯ ಸಿಬಂದಿ, ಕಾಡಂಚಿನ ಪ್ರದೇಶದ ಜನರನ್ನು ಗುರುತಿಸಿ ಮೈಗೆ ಹಚ್ಚುವ ರೋಗ ನಿರೋಧಕ ಡಿಎಂಪಿ ಆಯಿಲ್ ಅನ್ನು ವಿತರಣೆ ಮಾಡಲಾಗಿದೆ. ಕಾರಿಂಜ ಸಹಿತ ತಾಲೂಕಿನ ಇತರ ಭಾಗದಲ್ಲಿ ಕಾರ್ಯಾಚರಣೆ ನಡೆಸಿ, ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ರಕ್ತ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ವಿವರ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.