Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Team Udayavani, May 6, 2024, 2:28 PM IST
ಬಂಟ್ವಾಳ: ಕಾರಿನ ಚಾಲಕರಿಗೆ ಸೈಡ್ ಕೊಟ್ಟಿಲ್ಲ ಕಾರಣಕ್ಕಾಗಿ ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿ, ಬಸ್ ಗೆ ಹಾನಿಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಆದಿತ್ಯವಾರ ಸಂಜೆ ವೇಳೆ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು ಬಸ್ ಚಾಲಕನಾಗಿದ್ದು, ಅವರ ಮೇಲೆ ಹಲ್ಲೆಯಾಗಿದೆ ಎಂದು ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆಯಿಂದ ಸುಮಾರು 30 ಸಾವಿರ ರೂ ನಷ್ಟ ಸಂಭವಿಸಿದೆ ಎಂದು ತಿಳಿಸಲಾಗಿದೆ.
ಕೆಎಸ್ಆರ್ ಟಿಸಿಗೆ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ವಿವರ
ಮಂಗಳೂರು ಡಿಪೋದಿಂದ ಸೋಮವಾರ ಪೇಟೆಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಮಾರ್ಗದಲ್ಲಿ ಸುಮಾರು 4 ಗಂಟೆಗೆ ದಾಸಕೋಡಿಗೆ ಬಸ್ ತಲುಪಿದಾಗ ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೊಂದಾವಣೆಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಈ ಎರಡು ಕಾರುಗಳಿಗೆ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ.
ಬಳಿಕ ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಕೈಯಿಂದ ಹಣೆಗೆ ಮುಖಕ್ಕೆ ಎಡಕೈಗೆ ಹಿಗ್ಗಾಮುಗ್ಗ ಹೊಡೆದು ಅವ್ಯಾಚ್ಚ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.