ಕಾಲ್ಬೆರಳ ಸಹಾಯದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಶಾಸಕ ರಾಜೇಶ್ ನಾಯ್ಕ್ ನೆರವು
Team Udayavani, Aug 24, 2020, 8:15 PM IST
ಬಂಟ್ವಾಳ: ಎಸೆಸೆಲ್ಸಿ ಪರೀಕ್ಷೆಯನ್ನು ಕಾಲಿನ ಬೆರಳಿನ ಸಹಾಯದಿಂದ ಬರೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ಬಂಟ್ವಾಳದ ವಿದ್ಯಾರ್ಥಿ ಕೌಶಿಕ್ ಅವರ ಮುಂದಿನ ಶಿಕ್ಷಣಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೀಡಿದ ಭರವಸೆಯಂತೆ ನೆರವಾಗಿದ್ದಾರೆ.
ಪ್ರಸ್ತುತ ಕೌಶಿಕ್ ಅವರು ಮೂಡಬಿದಿರೆ ಆಳ್ವಾಸ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಪಡೆದಿದ್ದಾರೆ. ಕಾಲಿನ ಮೂಲಕ ಎಸೆಸೆಲ್ಸಿ ಪರೀಕ್ಷೆ ಬರೆದು ಶಿಕ್ಷಣ ಸಚಿವರಿಂದ ಮೆಚ್ಚುಗೆ ಪಡೆದ ಸಂದರ್ಭ ಶಾಸಕರು, ವಿದ್ಯಾರ್ಥಿಯ ಆಸಕ್ತಿಯನ್ನು ತಿಳಿದುಕೊಂಡು ನೆರವು ನೀಡುವುದಾಗಿ ತಿಳಿಸಿದ್ದರು.
ಹೀಗಾಗಿ ಕೌಶಿಕ್ ಅವರು ಆಳ್ವಾಸ್‌ನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಲಿಯುವ ಆಸಕ್ತಿ ವ್ಯಕ್ತಪಡಿಸಿದ್ದು, ವಿದ್ಯಾರ್ಥಿ ಕೌಶಿಕ್ ಶಾಸಕರನ್ನು ಕಚೇರಿಯಲ್ಲಿ ಭೇಟಿಯಾದ ವೇಳೆ ಶಾಸಕರು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ.ಮೋಹನ್ ಆಳ್ವ ಅವರ ಜತೆ ಮಾತುಕತೆ ನಡೆಸಿ ದಾಖಲಾತಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಮೂಡಬಿದಿರೆಯಲ್ಲಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಯು ಡಾ| ಎಂ.ಮೋಹನ್ ಆಳ್ವ ಅವರನ್ನು ಭೇಟಿಯಾಗಿದ್ದು, ಕೌಶಿಕ್‌ನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ತಮ್ಮ ಶಿಕ್ಷಣ ಸಂಸ್ಥೆಯು ಈ ಪ್ರತಿಭಾವಂತ ವಿದ್ಯಾರ್ಥಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಡಾ. ಆಳ್ವರು ಭರವಸೆ ನೀಡಿದ್ದಾರೆ ಎಂದು ಕೌಶಿಕ್ ಮನೆಯವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.