ಬಂಟ್ವಾಳ: ಏಕಾಏಕಿ ಬಂದ ಡ್ಯಾಮ್ ನೀರು, ಪಾರಾದ 6 ವಿದ್ಯಾರ್ಥಿಗಳು
Team Udayavani, Oct 24, 2018, 4:56 PM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಆಟವಾಡಲು ತೆರಳಿದ್ದ ವೇಳೆ ಎಎಂಆರ್ ಡ್ಯಾಂನಿಂದ ನೀರು ಹರಿ ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನೀರಿನ ರಭಸಕ್ಕೆ ಬಂಡೆಕಲ್ಲಿನ ಮೇಲೆ ಸಿಲುಕಿಕೊಂಡ ಘಟನೆ ಬುಧವಾರ ತಾಲೂಕಿನ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ವಾಲ್ಮೀಕಿ ಜಯಂತಿ ಪ್ರಯುಕ್ತ ಶಾಲೆಗೆ ರಜೆಯಿದ್ದ ಕಾರಣ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವೂರ ಲಕ್ಷ್ಮೀ ವಿಷ್ಣು ಮೂರ್ತಿ ದೇವಸ್ಥಾನದ ಸಮೀಪವಿರುವ ನೇತ್ರಾವತಿ ನದಿಗೆ 11 ವಿದ್ಯಾರ್ಥಿಗಳ ತಂಡ ಆಟವಾಡಲು ತೆರಳಿತ್ತು. ಈ ವೇಳೆ ಇಲ್ಲಿನ ಸಮೀಪದ ಶಂಭೂರು ಎಎಂಆರ್ ಡ್ಯಾಂನಿಂದ ಏಕಾಏಕಿ ನೀರನ್ನು ಹೊರಬಿಡಲಾಗಿತ್ತು.
ನೀರಿನ ರಭಸ ಹಾಗೂ ಏಕಾಏಕಿ ನೀರಿನ ಮಟ್ಟ ಏರಿಕೆಯಾಗುದನ್ನು ಕಂಡ 6 ವಿದ್ಯಾರ್ಥಿಗಳು ಈಜಿ ದಡ ಸೇರಿದರೆ, ಉಳಿದ ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನದಿಯ ಇನ್ನೊಂದು ಬದಿಯಲ್ಲಿದ್ದ ದೊಡ್ಡ ಬಂಡೆಕಲ್ಲಿನ ಮೇಲೆ ಹತ್ತಿದ್ದಾರೆ. ನದಿಯ ಇನ್ನೊಂದು ಬದಿಯಲ್ಲಿದ್ದ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೊಬ್ಬೆ ಹಾಗೂ ಕಿರುಚಾಟ ನಡೆಸಿದ್ದಾರೆ. ತಕ್ಷಣ ಇಲ್ಲಿನ ಸ್ಥಳೀಯರ ತಂಡ ನದಿಗೆ ಧುಮುಕಿ ಹಗ್ಗದ ಮೂಲಕ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದೆ. ಈ ವಿದ್ಯಾರ್ಥಿಗಳು ಹೊರ ತಾಲೂಕಿನವರಾಗಿದ್ದು ¸ಸ್ಥಳೀಯ ಎಸ್ವಿಎಸ್ ಕಾಲೇಜಿಗೆ ಕ್ರೀಡಾಕೂಟಕ್ಕೆ ಬಂದವರು ಎಂದು ಹೇಳಲಾಗುತ್ತಿದೆ. ನೀರು ಬಿಡುವಾಗ ಮುಂಜಾಗ್ರತಾ ಕ್ರಮವಾಗಿ ಸೈರನ್ ಬಾರಿಸಿದೆ ಎಂದು ಶಂಭೂರು ಎಎಂಆರ್ ಡ್ಯಾಂ ಸ್ಪಷ್ಟ ಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.