ಕತ್ತಾರ್ ನಲ್ಲಿ ರಸ್ತೆ ಅಪಘಾತ: ಬಂಟ್ವಾಳ ಸಜೀಪದ ಯುವಕ ಮೃತ್ಯು
Team Udayavani, Dec 7, 2022, 11:18 PM IST
ಬಂಟ್ವಾಳ : ಬಂಟ್ವಾಳ ಸಜೀಪದ ಯುವಕನೋರ್ವ ಕತ್ತಾರ್ ನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟ ಘಟನೆ ಡಿ. 6 ರ ರಾತ್ರಿ ನಡೆದಿದೆ.
ಸಜೀಪನಡುವಿನ ಕಂಚಿನಡ್ಕಪದವು ಚಟ್ಟೆಕ್ಕಲ್ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಫಹದ್(24) ಮೃತಪಟ್ಟ ಯುವಕ. ಆತ ತನ್ನ ಮಾಲಕನ ಪುತ್ರನನ್ನು ರೆಸಾರ್ಟ್‌ವೊಂದರಲ್ಲಿ ಬಿಟ್ಟು ಹಿಂದಿರುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಮೃತಪಟ್ಟಿದ್ದಾನೆ. ಅವರು ಐದು ತಿಂಗಳ ಹಿಂದಷ್ಟೇ ಕತ್ತಾರಿಗೆ ತೆರಳಿದ್ದು, ಅಲ್ಲಿ ಚಾಲಕನಾಗಿ ದುಡಿಯುತ್ತಿದ್ದರು ಎನ್ನಲಾಗಿದೆ.
ಕೊರೊನಾ ಪೂರ್ವದಲ್ಲಿ ಫಹದ್ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಇಲ್ಲೇ ಚಾಲಕನಾಗಿ ದುಡಿಯುತ್ತಿದ್ದ. ಆದರೆ ಕತ್ತಾರ್ ನಲ್ಲಿ ಉದ್ಯೋಗವಿದೆ ಎನ್ನುವ ಕಾರಣಕ್ಕೆ 5 ತಿಂಗಳ ಹಿಂದಷ್ಟೇ ತೆರಳಿದ್ದರು.
ಡಿ. 6ರ ರಾತ್ರಿ ಅಪಘಾತ ನಡೆಯುವ ಕೆಲ ಹೊತ್ತಿನ ಹಿಂದಷ್ಟೇ ಮನೆಯವರ ಜತೆ ಮಾತನಾಡಿದ್ದರು ಎನ್ನಲಾಗಿದೆ. ಅವರ ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕುಟುಂಬ ಪ್ರಯತ್ನ ನಡೆಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಕೃಷಿ ಸಾಲ ಮಂಜೂರಾತಿಗೆ ಲಂಚ: ಬ್ಯಾಂಕ್ ಮ್ಯಾನೇಜರ್‌ಗೆ ಜೈಲು ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.