Bantwala; ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ!

Team Udayavani, Oct 30, 2023, 5:50 PM IST

Bantwala; ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ!

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,‌ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22 ವ) ಮೃತಪಟ್ಟ ಮಹಿಳೆ.

ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಕಾರಣಕ್ಕಾಗಿ ನೌಸೀನ್ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು. ಮಾನಸಿಕವಾಗಿ ನೊಂದಿದ್ದ ನೌಸೀನ್ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಲವ್ ಮ್ಯಾರೇಜ್: ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅಗಸ್ಟ್14 ರಂದು ಮದುವೆಯಾಗಿತ್ತು.

ಮಗಳ ಮದುವೆಗಾಗಿ ತಂದೆ 18 ಪವನ್ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಗಂಡ ಅಜ್ಮಾನ್ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ, ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.

ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು. ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ, ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.