“ಬ್ಯಾರಿ ಭಾಷೆ ಸಂರಕ್ಷಣೆಗೆ ಕಾರ್ಯನಿರ್ವಹಿಸಿ’
ಬ್ಯಾರಿ ಭಾಷೆ, ಸಂಸ್ಕೃತಿ ಬೆಳವಣಿಗೆ ಪೂರಕ ಕಾರ್ಯಕ್ರಮ
Team Udayavani, Apr 21, 2019, 6:37 AM IST
ಮಹಾನಗರ: ಬ್ಯಾರಿ ಭಾಷೆ,ಸಾಹಿತ್ಯ,ಸಂಸ್ಕೃತಿ ಸಂರಕ್ಷಣೆಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವುದು ಅಗತ್ಯ ಎಂದು ಮಾಜಿ ಮೇಯರ್ ಅಶ್ರಫ್ ಹೇಳಿದರು.
ಇಮಾಂ ಗಝಾlಲಿ ಫೌಂಡೇಶನ್ ಮಂಗಳೂರು ಇದರ ಆಶ್ರಯದಲ್ಲಿ ಸ್ಟೇಟ್‌ಬ್ಯಾಂಕ್ ಮುಂಭಾಗದಲ್ಲಿರುವ ಕಟ್ಟಡದಲ್ಲಿ ಶುಕ್ರವಾರ ನಡೆದ ಬಿಸೆಲಿಲ್ ಬೀತಿಯೊ ಕಲ್ತಪ್ಪ ಪಿನ್ನೆ ಚಾಯ ಮತ್ತು ನೋಂಬುಗು ಮರ್‌ಹಬ ಲೇಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕರಾವಳಿ ಪ್ರಾಧಿ ಕಾರದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿ ಜಾಲ್ ಮಾತನಾಡಿ, ಬ್ಯಾರಿ ಭಾಷೆ ಮತ್ತು ಸಾಹಿತ್ಯ ಬೆಳವಣಿಗೆಗೆ ಬ್ಯಾರಿ ಅಕಾಡೆಮಿ, ಅಧ್ಯಯನ ಪೀಠ ಮತ್ತು ಶಬ್ದಕೋಶ ಮಹತ್ತರ ಕೊಡುಗೆಯಾಗಿದೆ. ಇದರಿಂದ ಬ್ಯಾರಿ ಭಾಷೆಯ ಅಧ್ಯಯನಕ್ಕೆ ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿ ಬ್ಯಾರಿ ಮತದಾರರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ನಾವೆಲ್ಲ ಸೇರಿ ಒಗ್ಗಟ್ಟು ಪ್ರದರ್ಶನ ಮಾಡಿದರೆ ಬ್ಯಾರಿ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.
ಕವನ ವಾಚನ,ಉಪನ್ಯಾಸ
ಯು.ಎ. ಖಾಸಿಂ ಉಳ್ಳಾಲ, ಮಹ ಮ್ಮದ್ ಅಲಿ ಮಾತನಾಡಿದರು. ಹುಸೈನ್ ಕಾಟಿಪಳ್ಳ, ಹಸನಬ್ಬ ಮೂಡುಬಿದಿರೆ ಕವನ ವಾಚಿಸಿದರು. ಶೇಖ್ ಮಹಮ್ಮದ್ ಇರ್ಫಾನಿ ಉಪವಾಸದ ಮಹತ್ವದ ಬಗ್ಗೆ ಉಪದೇಶ ಮಾಡಿದರು.
ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಇಮಾಂ ಗಝಾಲಿ ಫೌಂಡೇಶನ್‌ನ ಅಧ್ಯಕ್ಷ ಆರೀಸ್ ತೋಡಾರ್, ಅಬ್ದುಲ್ ಖಾದರ್ ಕುತ್ತೆತ್ತೂರು, ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಿ.ಎಂ. ಮುಸ್ತಫಾ, ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಮುಸ್ಲಿಂ ಒಕ್ಕೂಟದ ಸದಸ್ಯ ಯು. ಮಹಮ್ಮದ್ ಹನೀಫ್, ಮುಸ್ಲಿಂ ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಮಹಮ್ಮದ್ ಬಪ್ಪಳಿಗೆ, ಕಾಂಗ್ರೆಸ್ ಮುಖಂಡ ಅಬ್ದುಲ್ ರಹ್ಮಾನ್ ಭಟ್ಕಳ್ ಮೊದಲಾದವರು ಉಪಸ್ಥಿತರಿದ್ದರು. ಯೂಸುಫ್ ವಕ್ತಾರ್ ಅವರು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.