ತಡೆಗೋಡೆಗೆ ಹಾನಿಯಾದರೆ ಬಾರ್ಜ್‌ ಕಂಪೆನಿಯೇ ಹೊಣೆ

Team Udayavani, Jun 7, 2017, 1:03 PM IST

barge-in-Ullal,-Mangaluru.jpg

ಮಂಗಳೂರು: ಉಳ್ಳಾಲದಲ್ಲಿರುವ ಬಾರ್ಜ್‌ ನಿಂದ ಸಮುದ್ರ ದೊಳಗೆ ನಿರ್ಮಿಸಿರುವ ಕಡಲ್ಕೊರೆತ ತಡೆಗೋಡೆ ರೀಫ್ಗೆ ಹಾನಿ ಸಂಭವಿಸಿದರೆ ಅದರ ನಷ್ಟವನ್ನು ಬಾರ್ಜ್‌ ಮಾಲಕರೇ ಭರಿಸಬೇಕು ಎಂದು ಎಡಿಬಿ ಯೋಜನಾಧಿಕಾರಿ ಗೋಪಾಲ ನಾಯ್ಕ ಹೇಳಿದ್ದಾರೆ.

ಈ  ಘಟನೆಗೆ ಸಂಬಂಧಿಸಿದಂತೆ ಮಂಗಳವಾರ “ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಅವರು, ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತಪ್ಪಿಸಲು ಸಮುದ್ರದೊಳಗೆ ತಡೆಗೋಡೆ ನಿರ್ಮಿಸ ಲಾಗಿದೆ. ಒಂದು ವೇಳೆ ಬಾರ್ಜ್‌ನಿಂದ ತಡೆಗೋಡೆಗೆ ಹಾನಿ ಉಂಟಾಗಿದ್ದರೆ ಅದನ್ನು ಬಾರ್ಜ್‌ ಮಾಲಕತ್ವದ ಧರ್ತಿ ಕಂಪೆನಿಯೇ ರಿಪೇರಿ ಮಾಡ ಬೇಕಾಗುತ್ತದೆ ಎಂದು ತಿಳಿಸಿದರು. ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬಾರ್ಜ್‌ ಕಂಪೆನಿಗೆ ಈಗಾಗಲೇ ಹಣ ಪಾವತಿ ಮಾಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಾರ್ಜ್‌ನಿಂದ ತಡೆಗೋಡೆಗೆ ಹಾನಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಸಾಧ್ಯವಿಲ್ಲ. ಸಮುದ್ರದಲ್ಲಿ ಅಲೆಗಳ ಅಬ್ಬರ ಕಡಿಮೆಯಾದ ಮೇಲೆ ಸರ್ವೆ ಮಾಡಲಾಗುವುದು. ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಪರಿಶೀಲಿಸಿ ಹಾನಿಯುಂಟಾಗಿದ್ದಲ್ಲಿ  ಕಂಪೆನಿ ಯಿಂದಲೇ ನಷ್ಟ-ಹಾನಿಯನ್ನು ವಸೂಲಿ ಮಾಡಲಾಗುವುದು. ಈ ಬಗ್ಗೆ ಚರ್ಚಿಸಲು ಬುಧವಾರ ಕಂಪೆನಿ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಗೋಪಾಲ ನಾಯ್ಕ ವಿವರಿಸಿದರು.

ಇಂಧನ ತೆರವಿಗೆ ಮೊದಲ ಆದ್ಯತೆ
ಬಾರ್ಜ್‌ನಲ್ಲಿರುವ ಇಂಧನ ಸಮುದ್ರದೊಳಗೆ ಸೋರಿಕೆಯಾಗದಂತೆ ತತ್‌ಕ್ಷಣ ಅದನ್ನು (ಇಂಧನ) ಹೊರತೆಗೆಯುವುದು ಅಗತ್ಯವಾಗಿದೆ. ಆದರೆ ಇಂಧನ ಸಮುದ್ರದೊಳಗೆ ಸೇರದಂತೆ ಕಂಪೆನಿಯೇ ತೆರವು ಮಾಡಬೇಕು. ಇಂಧನ ತೆರವುಗೊಳಿಸಲು ಕರಾವಳಿ ರಕ್ಷಣಾ ತಂಡದವರೊಂದಿಗೆ ಚರ್ಚಿಸಿ ಅವರ ನೆರವು ಪಡೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಸೂಕ್ತ ವರದಿ ಸಿದ್ಧಪಪಡಿಸಿದ ಅನಂತರ ಎಡಿಬಿ ಅಧಿಕಾರಿಗಳು, ಜಿಲ್ಲಾಡಳಿತ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜತೆಗೂಡಿ ಬಾರ್ಜ್‌ನ ಇಂಧನ ಹೊರತೆಗೆಯುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.