ಬಶೀರ್ ಸಾವು: ಹರಿದು ಬಂದ ಜನಸಾಗರ
Team Udayavani, Jan 8, 2018, 9:51 AM IST
ಮಹಾನಗರ: ಕೊಟ್ಟಾರ ಚೌಕಿಯಲ್ಲಿ ಫಾಸ್ಟ್‌ಫುಡ್ ವ್ಯಾಪಾರ ನಡೆಸುತ್ತಿದ್ದ ಆಕಾಶ ಭವನದ ಅಬ್ದುಲ್ ಬಶೀರ್ ಅವರು ನಾಲ್ಕು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ರವಿವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಈ ಸುದ್ದಿ ಹರಡುತ್ತಿದ್ದಂತೆಯೇ ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆಗೆ ಅವರ ಸಂಬಂಧಿಕರು ಸೇರಿದಂತೆ ಜನ ಸಾಗರ ಹರಿದು ಬಂದಿತ್ತು.
ಪೊಲೀಸರು ಬಿಗಿ ಬಂದೋಬಸ್ತು ವ್ಯವಸ್ಥೆ ಮಾಡಿದ್ದರು. ಜನ ದಟ್ಟಣೆ ಹೆಚ್ಚುತ್ತಿದ್ದಂತೆ ಮರಣೋತ್ತರ ಪರೀಕ್ಷೆಯ ಮೊದಲೇ ಸಾರ್ವಜನಿಕರಿಗೆ ಬಶೀರ್ ಮೃತ ದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಮೃತ ಅಬ್ದುಲ್ ರಶೀದ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನದ ಬಳಿಕ ಕೆಲವೇ ಹೊತ್ತಿನಲ್ಲಿ ಅವರು ವಾಪಸ್ ಮನೆಗೆ ತೆರಳಿದರು.
ಸ್ಥಳದಲ್ಲಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಶಾಸಕ ಮೊದೀನ್ ಬಾವಾ, ಅಬ್ದುಲ್ ಬಶೀರ್
ಅವರ ಸಹೋದರ ಹಕೀಂ ಅವರು ಆಸ್ಪತ್ರೆಯ ಬಳಿ ಸೇರಿದ ಜನರಿಗೆ ಯವುದೇ ನೂಕುನುಗ್ಗಲು ಮಾಡದೆ ಸರತಿ ಸಾಲಿನಲ್ಲಿ ಹೋಗಿ ಅಂತಿಮ ದರ್ಶನ ಪಡೆಯುವಂತೆ ಮನವಿ ಮಾಡಿದರು. ಅದರಂತೆ ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಪಾರ್ಥಿವ ಶರೀರವನ್ನು ಕುಟುಂಬರಿಗೆ ಹಸ್ತಾಂತರಿಸಲಾಯಿತು.
ಮುಖಂಡರ ಭೇಟಿ
ಅಬ್ದುಲ್ ಬಶೀರ್ ಅವರ ಸಾವಿನ ಸುದ್ದಿ ತಿಳಿಯುತ್ತಿದಂತೆಯೇ ಸಚಿವ ಯು.ಟಿ. ಖಾದರ್, ಶಾಸಕ ಮೊದೀನ್ ಬಾವಾ,
ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಹಾಗೂ ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ಭೇಟಿ ನೀಡಿ ಅಂತಿಮ
ದರ್ಶನ ಪಡೆದರು.
ಪೊಲೀಸ್ ಬಂದೋಬಸ್ತು
ಎ.ಜೆ. ಆಸ್ಪತ್ರೆಯ ಶವಗಾರದ ಬಳಿ ಬಿಗು ಪೊಲೀಸ್ ಬಂದೋಬಸ್ತು ಮಾಡಲಾಗಿತ್ತು. ಸ್ಥಳೀಯ ಪೊಲೀಸರಲ್ಲದೆ ಮೀಸಲು ಪಡೆಯ ಪೊಲೀಸರನ್ನು ಕೂಡ ಸ್ಥಳದಲ್ಲೇ ನಿಯೋಜಿಸಲಾಗಿತ್ತು. ರಾಜ್ಯ ಎಡಿಜಿಪಿ ಕಮಲ್ ಪಂತ್, ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್, ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್, ಎಸಿಪಿಗಳಾದ ಉದಯ ನಾಯಕ್, ವೆಲೆಂಟೈನ್ ಡಿ’ಸೋಜಾ ಹಾಗೂ ನಗರದ ವಿವಿಧ ಪೊಲೀಸ್ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಸ್ಥಳದಲ್ಲಿ ಉಪಸ್ಥಿತರಿದ್ದು ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.