ಬಶೀರ್ ಆರೋಗ್ಯ ಸ್ಥಿತಿ ಕೊಂಚ ಸುಧಾರಣೆ
Team Udayavani, Jan 7, 2018, 6:15 AM IST
ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ಜ. 3ರಂದು ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೆ ಒಳಗಾದ ಆಕಾಶ ಭವನದ ಅಬ್ದುಲ್ ಬಶೀರ್ ಅವರ ಆರೋಗ್ಯ ಸ್ಥಿತಿಯಲ್ಲಿ ಕೊಂಚ ಚೇತರಿಕೆ ಕಂಡಿದೆ ಎಂದು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಗಂಭೀರವಿತ್ತು. ಈಗ ಅವರ ಸ್ಥಿತಿ ಹದಗೆಟ್ಟಿಲ್ಲ; ಕೊಂಚ ಚೇತರಿಕೆ ಇದೆ ಎಂದು ವಿವರಿಸಿದರು.
ಇದೇ ವೇಳೆ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪಿಂಕಿ ನವಾಜ್ ಮತ್ತು ರಿಜ್ವಾನ್ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಶನಿವಾರ ಅವರನ್ನು ಆಸ್ಪತ್ರೆಯ ವಾರ್ಡ್‌ಗೆ ವರ್ಗಾಯಿಸಲಾಗಿದೆ. 2- 3 ದಿನಗಳಲ್ಲಿ ಅವರು ಚೇತರಿಸಿ ಕೊಳ್ಳಲಿದ್ದು, ಬಳಿಕ ಅವರ ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಳ್ಳಲಾಗುವುದು ಎಂದರು.
ಬಂದೋಬಸ್ತು
ದೀಪಕ್ ರಾವ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ನಿಯೋಜಿಲಾಗಿದ್ದ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ 24 ಗಂಟೆ ಕಾಲವೂ ಗಸ್ತು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ವಿವರಿಸಿದರು.
ಮಾಧ್ಯಮಗಳಿಗೆ ಮನವಿ
ಸಾಮಾಜಿಕ ಸ್ವಾಸ್ತÂ ಕಾಪಾಡುವ ವಿಚಾರದಲ್ಲಿ ಪೊಲೀಸರಿಗೆ ಇರುವಷ್ಟೇ ಜವಾಬ್ದಾರಿ ಮಾಧ್ಯಮಗಳಿಗೂ ಇದೆ. ಆದ್ದರಿಂದ ಯಾವುದೇ ದೃಶ್ಯಾವಳಿಗಳನ್ನು ಪ್ರಸಾರ ಮಾಡುವ ಮೊದಲು ಅದು ಸಮಾಜದ ಆರೋಗ್ಯಕ್ಕೆ ಹಾನಿಕರವೇ ಎನ್ನುವುದನ್ನು ಮಾಧ್ಯಮಗಳು ಆಲೋಚಿಸಿ ಯೋಗ್ಯ ತೀರ್ಮಾನ ಕೈಗೊಳ್ಳಬೇಕು ಎಂದು ಆಯುಕ್ತರು ಸಲಹೆ ಮಾಡಿದರು.
ಬಶೀರ್ ಮೇಲಣ ಹಲ್ಲೆ ಪ್ರಕರಣ ಕುರಿತಂತೆ ಸಾಮಾಜಿಕ ಜಾಲ ತಾಣದಲ್ಲಿ ವೀಡಿಯೋ ವೈರಲ್ ಆಗಿರುವುದು ಹಾಗೂ ಕೆಲವು ವಾಹಿನಿಗಳು ಪ್ರಸಾರ ಮಾಡಿರುವ ಬಗ್ಗೆ ಆಂತರಿಕ ತನಿಖೆ ನಡೆಯುತ್ತಿದೆ. ಜಿಲ್ಲಾಡಳಿತವು ಮಾಧ್ಯಮಗಳಿಗೆ ಸಲಹಾ ಪತ್ರವನ್ನು ಸಿದ್ಧಗೊಳಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ವಿದ್ಯಾರ್ಥಿಗಳಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.