ಬಿ.ಸಿ.ರೋಡ್: ಲೋಕಾಯುಕ್ತ ತಂಡ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಭೇಟಿ
Team Udayavani, Jun 1, 2022, 12:29 PM IST
ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆಗೊಳಪಟ್ಟ ಬಿ.ಸಿ.ರೋಡ್‌ನ ಡಾ| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡ ಅವ್ಯವಸ್ಥೆಯ ಕುರಿತು ಸಾರ್ವಜನಿಕರೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಅಮಾನುಲ್ಲಾ ಹಾಗೂ ಸಿಬಂದಿ ಮಂಗಳವಾರ ಸಂಜೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತರ ಭೇಟಿಗೂ ಮುನ್ನ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ| ರಾಕೇಶ್ ಕುಮಾರ್ ಕೆ. ಭೇಟಿ ನೀಡಿ ಕಟ್ಟಡವನ್ನು ಪರಿಶೀಲನೆ ನಡೆಸಿದರು. ತರಗತಿಯ ಕಬ್ಬಿಣದ ಕಿಟಕಿಗಳು ತುಕ್ಕು ಹಿಡಿದು ಮಕ್ಕಳಿಗೆ ಆಗಬಹುದಾದ ಅಪಾಯ, ಗೋಡೆ ಬಿರುಕು ಬಿಟ್ಟಿರುವುದು, ನೀರು ಸೋರುವುದು, ಕಟ್ಟಡದ ಮತ್ತು ತರಗತಿಯೊಳಗೆ ಮೇಲ್ಛಾವಣಿಯಲ್ಲಿ ಕಾಂಕ್ರೀಟ್ ಸವೆದು ಸರಳುಗಳು ಕಾಣುವುದು ಮೊದಲಾದ ಸಮಸ್ಯೆಗಳ ಕುರಿತು ದಲಿತ ಮುಖಂಡ ವಿಶ್ವನಾಥ ಚಂಡ್ತಿಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಲೋಕಾಯುಕ್ತರು ಪರಿಶೀಲನೆ ನಡೆಸುತ್ತಿರುವ ವೇಳೆ ಹಾವೊಂದು ತರಗತಿ ಯೊಳಗೆ ಪ್ರವೇಶಿಸಲು ಹವಣಿಸುತ್ತಿರು ವುದನ್ನು ಕಂಡು ಎಲ್ಲರೂ ಅವಕ್ಕಾದರು. ಕಟ್ಟಡದ ಹೊರಭಾಗದ ಸುತ್ತ ಶುಚಿಗೊಳಿಸಲು ಪುರಸಭೆಗೆ ತಿಳಿಸುವಂತೆ ನಿಲಯ ಪಾಲಕರಿಗೆ ಸೂಚಿಸಿದರು. ವಸತಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದನ್ನು ಗಮನಿಸಿದ ಅವರು ಕಟ್ಟಡವನ್ನು ದುರಸ್ತಿಗೊಳಿಸುವುದು ಇಲ್ಲವೇ ಹೊಸ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ವಿದ್ಯಾರ್ಥಿಗಳೊಂದಿಗೂ ಸಂವಹನ ನಡೆಸಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆಯೇ ಎಂಬ ಮಾಹಿತಿ ಪಡೆದರು. ಸಕಲ ವ್ಯವಸ್ಥೆಯನ್ನು ಒಳಗೊಂಡಿದ್ದು, ರಾತ್ರಿ ಕಾವಲುಗಾರ ಇಲ್ಲದಿರುವುದನ್ನು ತಿಳಿದು ಕಟ್ಟಡ ಶಿಥಿಲಾವಸ್ಥೆಯ ಕುರಿತು ಲೋಕಾಯುಕ್ತ ಎಸ್ಪಿ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಆಶ್ರಮ ಶಾಲೆಯ ನಿಲಯ ಪಾಲಕ ಪ್ರಸಾದ್, ವಿಶ್ವನಾಥ ಚಂಡ್ತಿಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.