ಬೀಚ್‌ನತ್ತ ಜಾನುವಾರುಗಳು; ಕಡಲ ತೀರದಲ್ಲಿ ಪ್ಲಾಸ್ಟಿಕ್‌ಗಿಲ್ಲ ಕಡಿವಾಣ

ಬೀಚ್‌ ತೀರದ‌ಲ್ಲಿ ಸ್ವಚ್ಛತೆಯ ನಿರ್ಲಕ್ಷ್ಯ

Team Udayavani, Apr 12, 2019, 6:00 AM IST

0904mlr28

ಪಣಂಬೂರು ಬೀಚ್‌ನಲ್ಲಿರುವ ದನಗಳು.

ವಿಶೇಷ ವರದಿ- ಮಹಾನಗರ: ನಗರದ ಬೀಚ್‌ ಬದಿಗಳಲ್ಲಿ ಬೀದಿ ನಾಯಿಗಳು, ಬೀಡಾಡಿ, ಸಾಕು ದನಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸಂಜೆ ಹೊತ್ತಲ್ಲಿ ಬೀಚ್‌ನಲ್ಲಿ ಆಡಿ ಕಾಲ ಕಳೆಯೋಣ ಎಂದರೆ ಅಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದೆ. ಇದರಿಂದ ಪ್ರವಾಸಿಗರಿಗೆ ಕಿರಿ ಕಿರಿ ಉಂಟಾಗುತ್ತಿದೆ. ಕಡಲ ತೀರದಲ್ಲಿ ಪ್ಲಾಸ್ಟಿಕ್‌, ತ್ಯಾಜ್ಯ ಎಸೆದಿದ್ದು ಇವು ಜಾನುವಾರುಗಳಿಗೆ ಆಹಾರವಾಗುತ್ತಿದೆ.

ದಿನನಿತ್ಯ ಸಾವಿರಾರು ಮಂದಿ ಆಗಮಿಸುವ ತಣ್ಣೀರುಬಾವಿ, ಪಣಂಬೂರು ಕಡಲ ತೀರದಲ್ಲಿ ಬೀದಿ ನಾಯಿಗಳು, ಬೀಡಾಡಿ ದನಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಮಕ್ಕಳಿಗೆ ಈಗಾಗಲೇ ಪರೀಕ್ಷೆ ಮುಗಿದು ರಜೆ ಪ್ರಾರಂಭವಾಗಿದ್ದು, ಅವರು ಬೀಚ್‌ನಲ್ಲಿ ಆಟವಾಡುವಾಗ ಬೀದಿನಾಯಿಗಳು ಹತ್ತಿರ ಬರುತ್ತಿದ್ದು, ಇದರಿಂದಾಗಿ ಅವರನ್ನು ಬೀಚ್‌ಗೆ ಕರೆತರಲು ಹೆತ್ತವರು ಆತಂಕಪಡುವಂತಾಗಿದೆ.

ತ್ಯಾಜ್ಯ ವಿಲೇವಾರಿ ಇಲ್ಲ
ಬೀಚ್‌ಗಳಲ್ಲಿ ಪ್ಲಾಸ್ಟಿಕ್‌ ಬಾಟಲ್‌ಗ‌ಳು, ಪ್ಲಾಸ್ಟಿಕ್‌ ಚೀಲಗಳು ಸಹಿತ ತ್ಯಾಜ್ಯಗಳು ಬಿದ್ದಿದ್ದು, ಹೆಚ್ಚಿನ ವಸ್ತುಗಳನ್ನು ಕಸದ ಬುಟ್ಟಿಗೆ ಹಾಕಲಾಗಿದ್ದರೂ ಬುಟ್ಟಿಯಿಂದಲೇ ದನಗಳು ಪ್ಲಾಸ್ಟಿಕ್‌ ವಸ್ತುಗಳನ್ನು ತಿನ್ನುತ್ತಿವೆ. ಬೀಚ್‌ ತೀರದ‌ಲ್ಲಿ ಬಿದ್ದಿರುವ ಪ್ಲಾಸ್ಟಿಕ್‌ ವಸ್ತುಗಳಿಂದಾಗಿ ನಗರದ ಸ್ವತ್ಛತೆಗೂ ಹಾನಿಯಾಗುತ್ತಿದೆ. ಬಳಸಿದ ಪ್ಲಾಸ್ಟಿಕ್‌, ಇತರ ವಸ್ತುಗಳನ್ನು ಸರಿಯಾಗಿ ವಿಲೇವಾರಿ ಮಾಡದೇ ಇರುವುದರಿಂದ ಈ ಸಮಸ್ಯೆ ಎದುರಾಗಿದೆ.

ರಾಜ್ಯದಲ್ಲಿ 4ರಿಂದ 5 ಮೈಕ್ರಾನ್‌ ಪ್ಲಾಸ್ಟಿಕ್‌ ಚೀಲಗಳ ಮಾರಾಟ ನಿಷೇಧವಿದೆ. ಈ ಪ್ರಮಾಣದ ಪ್ಲಾಸ್ಟಿಕ್‌ಗಳನ್ನು ಯಾವುದೇ ಅಂಗಡಿಗಳಲ್ಲಿ ಮಾರಾಟ ಮಾಡಬಾರದು. ಒಂದು ವೇಳೆ, ಮಾರಾಟ ಮಾಡಿದರೆ ಅಂಗಡಿ ಮಾಲಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ನಿಯಮ 2015- 16ರಲ್ಲಿ ಜಾರಿಗೆ ಬಂದಿದೆ. ಅಲ್ಲದೆ, ಅಂಡಿಗಳಿಗೆ ಪರವಾನಿಗೆ ನೀಡುವ ವೇಳೆ ಪ್ಲಾಸ್ಟಿಕ್‌ ಬಳಸಬಾರದು ಎಂಬ ಸ್ಪಷ್ಟ ನಿಯಮ, ಎಚ್ಚರಿಕೆಯನ್ನೂ ಪಾಲಿಕೆ ನೀಡುತ್ತದೆ. ಆದರೆ ನಗರದ ಹೆಚ್ಚಿನ ಅಂಗಡಿಯವರು ಈ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ. ಇಂತಹ ಪ್ಲಾಸ್ಟಿಕ್‌ ಅನ್ನು ಗ್ರಾಹಕರು ರಸ್ತೆ ಬದಿಗಳಲ್ಲಿ, ಬೀಚ್‌ಗಳಲ್ಲಿ ಬಿಸಾಡುತ್ತಾರೆ.

ಗೂಳಿಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್‌!
ಕೆಲವು ತಿಂಗಳ ಹಿಂದೆಯಷ್ಟೇ ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಸುತ್ತಾಡುತ್ತಿದ್ದ ಗೂಳಿ ಕೊಂಬು ಕ್ಯಾನ್ಸರ್‌ನಿಂದ ಸಾವನ್ನಪ್ಪಿತ್ತು. ಇದರ ಪೋಸ್ಟ್‌ಮಾರ್ಟಂ ಮಾಡಿದಾಗ ಹೊಟ್ಟೆಯಲ್ಲಿ 20 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್‌, ಲೋಹದ ವಸ್ತುಗಳಿದ್ದವು. ಬೈಕಂಪಾಡಿಯ ಗೂಳಿಯ ಕೊಂಬಿನಲ್ಲಿ ಕಾಣಿಸಿಕೊಂಡ ಕ್ಯಾನ್ಸರ್‌ಗೆ ಅದು ತಿಂದ ಪ್ಲಾಸ್ಟಿಕ್‌ ತ್ಯಾಜ್ಯ ಮತ್ತು ರಾಸಾಯನಿಕ ಮಿಶ್ರಿತ ವಸ್ತುಗಳು ಕಾರಣವಾಗಿತ್ತು.

 ಪ್ರಾಣಿಗಳನ್ನು ಬಿಡಬಾರದು
ಬೀಚ್‌ಗಳಿಗೆ ಬರುವ ಪ್ರವಾಸಿಗರು ನಾಯಿಗಳಿಗೆ ಆಹಾರ ನೀಡುತ್ತಾರೆ. ಇದೇ ಕಾರಣಕ್ಕೆ ನಾಯಿಗಳು ಅಲ್ಲೇ ಇರುತ್ತವೆ. ದನಗಳನ್ನು ಅಥವಾ ನಾಯಿಗಳನ್ನು ಸಾಕುವ ಮಂದಿ ಅವುಗಳನ್ನು ಹೊರಗಡೆ ಬಿಡಬಾರದು. ರಾತ್ರಿ ಸಮಯದಲ್ಲಿ ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಹೆಚ್ಚಾಗಿ ನಾಯಿಗಳ ಕಾಟ ಇರುತ್ತದೆ.
– ಯತೀಶ್‌ ಬೈಕಂಪಾಡಿ,
ಪಣಂಬೂರು ಬೀಚ್‌ ಅಭಿವೃದ್ಧಿ ನಿಗಮದ ಸಿಇಒ

ಸ್ವಚ್ಛತೆಯ ಅರಿವು
ಬಿಚ್‌ ಸಹಿತ ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಈಗಾಗಲೇ ಅರಿವು ಮೂಡಿಸಲಾಗುತ್ತಿದೆ. ಸಂಘ ಸಂಸ್ಥೆಗಳ ಜತೆ ಸೇರಿ ಬೀಚ್‌ ಸ್ವಚ್ಛತೆ ಕೂಡ ನಡೆಸಲಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆ ಮಾಡಬಾರದು, ಎಲ್ಲೆಂದರಲ್ಲಿ ಬಿಸಾಡಬಾರದು ಎಂದು ಸಾರ್ವಜನಿಕರಿಗೆ ಅರಿವಾಗಬೇಕು.
 - ಜಯಪ್ರಕಾಶ್‌ ನಾಯಕ್‌,
ಮಾಲಿನ್ಯ ನಿಯಂತ್ರಣ ಮಂಡಳಿ, ಹಿರಿಯ ವೈಜ್ಞಾನಿಕ ಅಧಿಕಾರಿ

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.