ಬಂಟ್ವಾಳದಲ್ಲಿ ಜೇನು ನೊಣ ದಾಳಿ: 9 ಮಂದಿ ಗಂಭಿರ
Team Udayavani, Feb 27, 2022, 12:50 PM IST
ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೊಣ ದಾಳಿ ನಡೆಸಿ, ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ.
ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48) ಐತಪ್ಪ ಶೆಟ್ಟಿ (76) ಅರುಣ್ ಶೆಟ್ಟಿ (34) ಲಲಿತಾ ,(49) ಎಂಬವರ ಜೊತೆ ಉಳಿದ ನಾಲ್ವರು ಜೇನು ನೊಣ ಕಚ್ಚಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ನಾಲ್ವರ ಹೆಸರು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಇರ್ವತ್ತೂರು ಗ್ರಾಮದ ಕಲಾಬಾಗಿಲು ಎಂಬಲ್ಲಿ ಅಲ್ಲಿನ ಸ್ಥಳೀಯ ನಿವಾಸಿಗಳು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೀಟಿಂಗ್ ಗೆಂದು ತೆರಳುವ ವೇಳೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ.
ಇದನ್ನೂ ಓದಿ:ಉಡುಪಿಗೂ ಒಳ ಚರಂಡಿ: ಮುಂದಿನ ಬಜೆಟ್‌ನಲ್ಲಿ ಯೋಜನೆಗೆ ಹಣ ಸಿಗಲಿ
ನೊಣಗಳ ಗೂಡಿಗೆ ಗಿಡುಗ ಕಚ್ಚಿದ ಪರಿಣಾಮ ಕೋಪಗೊಂಡ ಜೇನು ನೊಣಗಳು ದಾರಿಯಲ್ಲಿ ಹೋಗುವ ಅಮಾಯಕರ ಮೇಲೆ ದಾಳಿ ಮಾಡಿದೆ.
ಗಾಯಗೊಂಡ ಐವರನ್ನು ಕೂಡ ಪುಂಜಾಲಕಟ್ಟೆ ಆಸ್ಪತ್ರೆಯ 108 ಅಂಬ್ಯುಲೆನ್ಸ್ ಚಾಲಕ ಜಗನ್ನಾಥ್ ಶೆಟ್ಟಿ ಅವರು ಸಕಾಲದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐವರಿಗೂ ಚಿಕಿತ್ಸೆ ನೀಡಲಾಗಿದ್ದು ಯಾವುದೇ ಪ್ರಾಣಾಪಾಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.