ಬೆಳ್ತಂಗಡಿ ತಂದೆಯಿಂದಲೇ ಮಗನ ಬರ್ಬರ ಹತ್ಯೆ
Team Udayavani, Feb 12, 2018, 9:20 AM IST
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕಾಗಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಮಟ್ಲ ಎಂಬಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿ ನವೀನ್(28) ತಂದೆ ಮಂಜುನಾಥ ಹಾಗೂ ಸಹೋದರ ರಾಘವೇಂದ್ರ ಸೇರಿಕೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಮಂಜುನಾಥ ಹಾಗೂ ರಾಘವೇಂದ್ರ ಬೆಳ್ತಂಗಡಿಯಲ್ಲಿ ಜ್ಯೋತಿಷ್ಯ ವೃತ್ತಿ ಮಾಡಿಕೊಂಡಿದ್ದು ನವೀನ ಮನೆಯಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದರು.
ನವೀನನಿಗೆ ಮದುವೆ ಆಗಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು ಮೂಲತಃ ಹಾಸನ ಮೂಲದವರಾಗಿದ್ದು ಸುಡುಗಾಡು ಸಿದ್ದ ಜನಾಂಗಕ್ಕೆ ಸೇರಿದವರಾಗಿರುತ್ತಾರೆ.
ಕೊಲೆ ಹಿನ್ನೆಲೆ: ಕಳೆದ ಡಿಸೆಂಬರ್ 31 ರಂದು ಮನೆಯಲ್ಲಿ ಹೊಸ ವರ್ಷ ಆಚರಣೆ ಮಾಡುವ ಸಂದರ್ಭದಲ್ಲಿ ಮೃತ ನವೀನನಿಗೆ ಹಾಗೂ ತಂದೆ ಮಂಜುನಾಥ ಅವರಿಗೆ ಯಾವುದೋ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ನವೀನನು ತಂದೆ ಮಂಜುನಾಥರಿಗೆ ಹೊಡೆದಿದ್ದನು. ಅದೇ ದ್ವೇಷದಿಂದ ಕಳೆದ ರಾತ್ರಿ ಸುಮಾರು 9 ಗಂಟೆ ಸಮಯಕ್ಕೆ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಮಂಜುನಾಥ ಹಾಗೂ ರಾಘವೇಂದ್ರ ಎಂಬವರು ಸೇರಿಕೊಂಡು ನವೀನನ ಹೊಟ್ಟೆಯ ಭಾಗಕ್ಕೆ ಹಾಗೂ ತೊಡೆಗೆ ಚೂರಿಯಿಂದ ತಿವಿದಿದ್ದಾರೆ ತೀವ್ರ ರಕ್ತಸ್ರಾವದಿಂದ ನವೀನ್ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.