ಬೆಳ್ತಂಗಡಿ: ಅಚ್ಚರಿ ಮೂಡಿಸಿದ ಸೂರ್ಯನ ಸುತ್ತಲಿನ ವೃತ್ತ
Team Udayavani, Oct 2, 2019, 1:17 PM IST
ಬೆಳ್ತಂಗಡಿ: ಸೂರ್ಯನ ಸುತ್ತ ವೃತ್ತಾಕಾರದ ಬೆಳಕು ಗೋಚರಿಸಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಬುಧವಾರ ಬೆಳಗ್ಗೆ ಕಂಡು ಬಂತು.
ಈ ಪ್ರಕ್ರಿಯೆ ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದ್ದು, ಇದು ಕಾಮನಬಿಲ್ಲು ಎಂದು ಭಾವಿಸಿ ವೀಕ್ಷಣೆಯಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಸೂರ್ಯನ ಸುತ್ತ ವಿಭಿನ್ನ ಬೆಳಕು ಗೋಚರಿಸಿದ್ದು, ಈ ವಿಶೇಷತೆ ಈಗ ಎಲ್ಲರ ಮೊಬೈಲ್ ನಲ್ಲಿ ಸ್ಟೇಟಸ್ ಆಗಿ ಹರಿದಾಡುತ್ತಿದೆ.
ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.
ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣವು ಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ, ಆಕರ್ಷಕ ಕಾಮನಬಿಲ್ಲು ಗೋಚರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು. ವಿಭಿನ್ನ ಸ್ಥಳಗಳಲ್ಲಿ ವಿಭಿನ್ನ ಸಮಯದಲ್ಲಿ ಇದು ಗೋಚರಿಸುತ್ತದೆ ಎಂದು ಸ್ಥಳೀಯ ವಿಜ್ಞಾನಿಗಳು ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.