“ಬೆಳ್ತಂಗಡಿ ನ.ಪಂ.ಗೆ 4.45 ಕೋ.ರೂ. ಅನುದಾನ’


Team Udayavani, Feb 27, 2017, 12:55 PM IST

2602ble4ph.jpg

ಬೆಳ್ತಂಗಡಿ : ಬೆಳ್ತಂಗಡಿ ನಗರ ಪಂಚಾಯತ್‌ಗೆ ಸರಕಾರದಿಂದ 4.45 ಕೋ.ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.

ಅವರು ರವಿವಾರ ಇಲ್ಲಿನ ನ.ಪಂ. ಸಮೀಪ ನ.ಪಂ. ವತಿಯಿಂದ 2016-17ನೇ ಸಾಲಿನ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ  8.5 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು. ಸೋಮಾವತಿ ನದಿಗೆ ಕಿಂಡಿ ಅಣೆಕಟ್ಟು ರಚನೆಗೆ 85 ಲಕ್ಷ ರೂ., ಸೋಮಾವತಿ ನದಿಗೆ ತಡೆಗೋಡೆ ರಚನೆಗೆ 60 ಲಕ್ಷ ರೂ., ನ.ಪಂ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 3 ಕೋ.ರೂ. ಮಂಜೂರಾಗಿದೆ ಎಂದರು.

ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಳ್ಳಿ,  ವಿದ್ಯಾರ್ಥಿ ಜೀವನ ಸುಗಮವಾಗಿದ್ದರೆ ನಾವು ಜೀವನ ಪರ್ಯಂತ ಸುಖದಿಂದಿರಲು ಸಾಧ್ಯ. ಹೆತ್ತವರು ಮಕ್ಕಳಿಗೆ ಸರಿಯಾದ ಶಿಕ್ಷಣ ಕೊಡಿಸಬೇಕು. ಕಲಿಯುವ ವಯಸ್ಸಿನಲ್ಲಿ ದುಡಿಯಲು ಕಳುಹಿಸಬಾರದು. ಮಕ್ಕಳು ಕಲಿತರೆ ಹೆತ್ತವರಿಗೆ ಅದೇ ದೊಡ್ಡ ಸಂಪತ್ತು ಎಂದರು.

ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್‌ ಅಧ್ಯಕ್ಷತೆ ವಹಿಸಿ, 10ನೇ  ತರಗತಿಯ 10 ವಿದ್ಯಾರ್ಥಿಗಳಿಗೆ  ತಲಾ 2,000 ರೂ.ಗಳಂತೆ 20 ಸಾವಿರ ರೂ., ಪಿಯುಸಿಯ 26 ವಿದ್ಯಾರ್ಥಿಗಳಿಗೆ ತಲಾ 3 ಸಾವಿರ ರೂ.ಗಳಂತೆ   78,000 ರೂ., ಪದವಿಯ 11 ವಿದ್ಯಾರ್ಥಿಗಳಿಗೆ ತಲಾ 4,000 ರೂ.ಗಳಂತೆ 44 ,000 ರೂ., ವೃತ್ತಿ ಶಿಕ್ಷಣದ 11 ವಿದ್ಯಾರ್ಥಿಗಳಿಗೆ ತಲಾ 4,000 ರೂ.ಗಳಂತೆ 44,000 ರೂ., ಸ್ನಾತಕೋತ್ತರದ ಒಬ್ಬ ವಿದ್ಯಾರ್ಥಿಗೆ 6 ಸಾವಿರ ರೂ.ಯನ್ನು ಶೇ.24.1ರ ಯೋಜನೆಯಡಿ ನೀಡಲಾಗಿದೆ. ಶೇ.7.25ರ ಯೋಜನೆಯಲ್ಲಿ ಎಸೆಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಒಟ್ಟು 4.06 ಲಕ್ಷ ರೂ. ನೀಡಲಾಗಿದೆ. ಶೇ. 3ರ ಯೋಜನೆಯಡಿ 42 ಮಂದಿಗೆ ತಲಾ 6,000 ರೂ.ಗಳಂತೆ 2.52 ಲಕ್ಷ ರೂ. ನೀಡಲಾಗಿದೆ ಎಂದರು.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಕೆ. ವಸಂತ ಬಂಗೇರ ಅವರನ್ನು  ಸಮ್ಮಾನಿಸಲಾಯಿತು. 

ಉಪಾಧ್ಯಕ್ಷ ಡಿ. ಜಗದೀಶ್‌, ಸ್ಥಾಯೀ  ಸಮಿತಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಜೈನ್‌, ಸದಸ್ಯರಾದ ಮಮತಾ ವಿ. ಶೆಟ್ಟಿ, ನಳಿನಿ ವಿಶ್ವನಾಥ್‌, ಲಲಿತಾ , ಕವಿತಾ, ಮುಸ್ತರ್‌ಜಾನ್‌ ಮೆಹಬೂಬ್‌, ಮುಖ್ಯಾಧಿಕಾರಿ ಜೆಸಿಂತಾ ಲೂಯಿಸ್‌ ಉಪಸ್ಥಿತರಿದ್ದರು. ಮಾಜಿ ಸದಸ್ಯ ಮೆಹಬೂಬ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.