ಅಕ್ರಮ-ಸಕ್ರಮಕ್ಕೆ  ಕಂಪ್ಯೂಟರೀಕೃತ ಅರ್ಜಿ: ಹರೀಶ್‌ ಪೂಂಜ

Team Udayavani, Dec 16, 2018, 11:39 AM IST

16-december-6.gif

ಬೆಳ್ತಂಗಡಿ: ಅಕ್ರಮ-ಸಕ್ರಮ ನಿವೇಶನದ ಕುರಿತು ತಾ| ಕಚೇರಿಯಲ್ಲಿ ಈಗಾಗಲೇ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭಗೊಂಡಿದ್ದು, ದಲ್ಲಾಳಿಗಳ ಹಾವಳಿ ತಪ್ಪಿಸುವ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಕಂಪ್ಯೂಟರೀಕೃತ ಅರ್ಜಿ ಸ್ವೀಕಾರ ಪ್ರಕ್ರಿಯೆ ನಡೆಯು ತ್ತಿದೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ಅವರು ಶನಿವಾರ ಇಲ್ಲಿನ ಮಿನಿ ವಿಧಾನಸೌಧದ ವಠಾರದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ ಮತ್ತು ಪರಿಹಾರಧನ ವಿತರಣೆ ಸಮಾರಂಭದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದರು.

ಸಮಗ್ರ ಬೆಳ್ತಂಗಡಿಯ ಅಭಿವೃದ್ಧಿ ದೃಷ್ಟಿಯಿಂದ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಅಕ್ರಮ-ಸಕ್ರಮದ ಬಾಕಿ ಉಳಿದಿರುವ ಕಡತಗಳನ್ನೂ ಶೀಘ್ರ ವಿಲೇವಾರಿ ಮಾಡಲಾಗುತ್ತದೆ. ಜತೆಗೆ ಪ್ರತಿ ಗ್ರಾಮಗಳಲ್ಲೂ ಬಾಕಿ ಉಳಿದಿರುವ 94ಸಿ ಯೋಜನೆಯ ಅರ್ಜಿಗಳ ಪಟ್ಟಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಅಡಿಕೆ ಬೆಳೆಗಾರರ ಹಿತಿದೃಷ್ಟಿಯಿಂದ ಸರಕಾರದ ಕೈಗೊಂಡಿರುವ ಕ್ರಮಗಳ ಕುರಿತು ಈಗಾಗಲೇ ವಿಧಾನಸಭಾ ಅಧಿವೇಶನದಲ್ಲಿ ಪ್ರಶ್ನೆ ಮಾಡುವ ಕಾರ್ಯವನ್ನು ಮಾಡಿದ್ದೇನೆ. ಸುಮಾರು ಶೇ. 65 ಶೇ. ರಷ್ಟು ಅಡಿಕೆ ಬೆಳೆ ನಾಶವಾಗಿರುವ ಕುರಿತು ಸರಕಾರವೇ ಒಪ್ಪಿಕೊಂಡಿದ್ದು, ಅದಕ್ಕೆ ಪರಿಹಾರ ವಿತರಿಸುವ ಕಾರ್ಯ ನಡೆಯಬೇಕಿದೆ. ಜತೆಗೆ ಮುಂದೆ ಬೆಳ್ತಂಗಡಿ ಕ್ಷೇತ್ರದ ವಸತಿರಹಿತರಿಗೆ ವಸತಿ ಕಲ್ಪಿಸುವ ಕಾರ್ಯವನ್ನೂ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವೇಣೂರು ಹೋಬಳಿ 141, ಕೊಕ್ಕಡ ಹೋಬಳಿಯ 168, ಬೆಳ್ತಂಗಡಿ ಹೋಬಳಿಯ 139 ಮಂದಿಗೆ 94ಸಿ ಹಾಗೂ ನಗರ ಭಾಗದ 12 ಮಂದಿಗೆ 94ಸಿಸಿ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಜಿ.ಪಂ. ಸದಸ್ಯರಾದ ಮಮತಾ ಎಂ. ಶೆಟ್ಟಿ, ಶಾಹುಲ್‌ ಹಮೀದ್‌, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌, ನಿರ್ಗಮಿತ ತಹಶೀಲ್ದಾರ್‌ ಮದನ್‌ ಮೋಹನ್‌ ಸಿ., ಪ್ರಭಾರ ತಹಶೀಲ್ದಾರ್‌ ಮಾಣಿಕ್ಯ ಎ., ತಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ಶೋಕಾಸ್‌ ನೋಟಿಸ್‌ ನೀಡಿ
94ಸಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಯ ಮಾಹಿತಿನೀಡದ ಗ್ರಾಮಕರಣಿಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸುವ ಕುರಿತು ಶೋಕಾಸ್‌ ನೋಟಿಸ್‌ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ತಾಲೂಕು ಕಚೇರಿಯಲ್ಲಿ ಸಿಬಂದಿ ಕೆಲಸದ ಕುರಿತು ಜನರಿಗೆ ತೊಂದರೆ ನೀಡಿದರೆ ನೇರವಾಗಿ ನನ್ನ ಬಳಿ ಬಂದು ತಿಳಿಸಿ, ಅಂತಹ ಸಿಬಂದಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹರೀಶ್‌ ಎಂಬುವವರ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರ ಖಾಯಂ ಹುದ್ದೆ ಕಡಿರುದ್ಯಾವರಕ್ಕೆ ಕಳುಹಿಸುವುದಕ್ಕೆ ಎಸಿ ಆದೇಶ ನೀಡಿದ್ದಾರೆ ಎಂದು ಶಾಸಕ ಹರೀಶ್‌ ಪೂಂಜ ವಿವರಿಸಿದರು.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.