“ಹಸುರು ಉಳಿಸಲು ಸಹಕರಿಸಿ’
ಬೆಳ್ತಂಗಡಿ: ಪರಿಸರ ದಿನಾಚರಣೆ
Team Udayavani, Jun 6, 2019, 6:15 AM IST
ಬೆಳ್ತಂಗಡಿ: ಪರಿಸರ ದಿನದ ಪ್ರಯುಕ್ತ ವಲಯ ಅರಣ್ಯ ಇಲಾಖೆ, ಸಂಘ-ಸಂಸ್ಥೆ, ಮಸೀದಿಗಳಲ್ಲಿ ಗಿಡ ನೆಟ್ಟು ಪರಿಸರ ಉಳಿಸಿ ಸಂದೇಶ ಸಾರಿದರು.
ಅರಣ್ಯ ಇಲಾಖೆಯಿಂದ ಕಲ್ಲಗುಡ್ಡೆ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್‌ನಲ್ಲಿ ಪಶ್ಚಿಮಘಟ್ಟದ ವಿಶೇಷ ಜಾತಿಯ ಗಿಡ ನೆಟ್ಟು ಸಾಂಕೇತಿಕವಾಗಿ ಪರಿಸರ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ, ಹಸುರು ಉಳಿವಿಗೆ ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕು. ಈಗಾಗಲೇ ಅರಣ್ಯ ಇಲಾಖೆಯಿಂದ ಈ ಬಾರಿ ಪಶ್ಚಿಮ ಘಟ್ಟದ ವಿಶೇಷ ಜಾತಿಯ 800 ಗಿಡ ನೆಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಉಪ ವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಗಿ, ದಿನೇಶ್ ಗೌಡ, ರಾಜೇಶ್ ಬಿ., ಉಲ್ಲಾಸ್, ಅರಣ್ಯ ರಕ್ಷಕರಾದ ರಾಜೇಂದ್ರ, ಸುಧಾಕರ್ ಮತ್ತಿತರ ವಲಯ ಅರಣ್ಯ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.