ಬಜಿಲಡ್‌ ಬೊಳ್ಳಿ ಪರ್ಬೊ : ತುಳುನಾಡಿನ ವೈಭವ ಅನಾವರಣ


Team Udayavani, Dec 22, 2018, 11:37 AM IST

22-december-6.gif

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಬಜಿಲ ಹರ್ಷ ಗೆಳೆಯರ ಬಳಗ ಹಾಗೂ ಸ್ನೇಹ ಯುವತಿ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ತಾ| ಮಟ್ಟದ ತುಳು ಸಾಹಿತ್ಯ ಸಮ್ಮೇಳನ ‘ಬಜಿಲಡ್‌ ಬೊಳ್ಳಿ ಪರ್ಬೊ-2018 ಕಾರ್ಯಕ್ರಮ’ ಡಿ. 22ರಂದು ಕೊಯ್ಯೂರಿನ ಬಜಿಲ ಶಾಲಾ ವಠಾರದಲ್ಲಿ ಜರಗಲಿದೆ.

ಉದ್ಘಾಟನೆ
ಬೆಳಗ್ಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ಕ್ಷೇತ್ರದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇನ್ದ್ರ  ಕುಮಾರ್‌ ಉದ್ಘಾಟಿಸಲಿದ್ದಾರೆ. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ ವಹಿಸಲಿದ್ದು, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಆಶಯ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ಗಣ್ಯರು ಭಾಗವಹಿಸಲಿದ್ದಾರೆ.

ಸಮ್ಮಾನ – ವಿಚಾರಗೋಷ್ಠಿ
ಕಾರ್ಯಕ್ರಮದ ಆರಂಭ ದಲ್ಲಿ ತುಳು ಸಾಂಪ್ರದಾಯಿಕ ರೀತಿಯ ವಿಶೇಷ ಮೆರವಣಿಗೆ ಜರಗಲಿದೆ. ಉದ್ಘಾಟನೆಯ ಸಂದರ್ಭದಲ್ಲಿ ಆಟಿ ಕಳೆಂಜ, ಗುಮ್ಮಟೆ, ಕರ್‌ಂಗೋಲು, ಪಾಡ್ಡನ ವಿಶೇಷ ಮೆರುಗನ್ನು ನೀಡಲಿದೆ. ವಿವಿಧ ಕ್ಷೇತ್ರದ ಗಣ್ಯರಿಗೆ ಸಮ್ಮಾನ, ಮಧ್ಯಾಹ್ನ ವಿಚಾರಗೋಷ್ಠಿ, ಕವಿಗೋಷ್ಠಿ ನಡೆಯಲಿದೆ.

ಸೋರ್ತಿ ಆಟ
ಈ ಸಂದರ್ಭ ಸೋರ್ತಿ ಆಟ ಜರಗಲಿದ್ದು, ಪ್ರಥಮ ಬಹುಮಾನವಾಗಿ 3 ಮಂದಿಗೆ ಮುಡಿ ಅಕ್ಕಿ, ದ್ವಿತೀಯ 2 ಮಂದಿಗೆ ಮುಡಿ ಅಕ್ಕಿ, 5 ಮಂದಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

ವಸ್ತುಪ್ರದರ್ಶನ 
ಕಾರ್ಯಕ್ರಮದಲ್ಲಿ ತುಳುನಾಡಿನ ತಿಂಡಿ-ತಿನಸುಗಳ ಮಳಿಗೆ, ಬುಟ್ಟಿ- ಮುಟ್ಟಾಳೆ, ಸೋಜಿಯ ಅಂಗಡಿ, ಕಟ್ಲೇರಿ ಅಂಗಡಿಗಳು, ಬಳೆ ಅಂಗಡಿ, ಹಳ್ಳಿ ಮನೆ ಹೈದರಾಲಿ ಅವರ ಅಪರೂಪದ ತುಳು ವಸ್ತುಗಳ ಸಂಗ್ರಹದ ಪ್ರದರ್ಶನ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯವರಿಂದ ಕೃಷಿ ಯಂತ್ರಗಳ ಪ್ರದರ್ಶನ, ಅಡಿಕೆಯ ರಾಶಿ, ಬೈಹುಲ್ಲಿನ ಬಣವೆ, ತೆಂಗಿನ ಕಾಯಿಯ ರಾಶಿ, ಊರಿನ ಕೋಳಿಗಳ ಪ್ರದರ್ಶನ, ನರ್ಸರಿ ಮೊದಲಾದವುಗಳು ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಇನ್ನೂ ಅನೇಕ ಮಳಿಗೆಗಳು ಈ ವಸ್ತುಪ್ರದರ್ಶನದಲ್ಲಿ ನೋಡುಗರ ಮನಸೂರೆಗೊಳ್ಳಲಿವೆ.

ಸಾಂಸ್ಕೃತಿಕ ಕಾರ್ಯಕ್ರಮ
ಮಧ್ಯಾಹ್ನ ವಿಟ್ಠಲ ನಾಯಕ್‌ ಕಲ್ಲಡ್ಕ ಇವರಿಂದ ಗೀತ ಸಾಹಿತ್ಯ ಸಂಭ್ರಮ, ಪ್ರೌಢಶಾಲಾ ವಿದ್ಯಾರ್ಥಿಗಳಿಂದ ತಾಲೂಕು ಮಟ್ಟದ ತುಳು ಸಂಸ್ಕೃತಿ ಗೀತೆ -ನೃತ್ಯ ವೈವಿಧ್ಯ, ವಿಶ್ವನಾಥ ಕೂಡಿಗೆ ಬೆಳಾಲು ಇವರಿಂದ ತುಳು ಜಾನಪದ ನೃತ್ಯ, ಬಜಿಲ ಸರಕಾರಿ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಚಾವಡಿ ಕೂಟ, ಹರ್ಷ ಗೆಳೆಯರ ಬಳಗ ಮತ್ತು ಸ್ನೇಹ ಯುವತಿ ಮಂಡಲ ಬಜಿಲ ಇದರ ಕಲಾವಿದರಿಂದ ತೆಲಿಕೆ-ನಲಿಕೆ, ಶಬರಿ ಕಲಾವಿದರು ಕಕ್ಕಿಂಜೆ ಇದರ ಕಲಾವಿದರಿಂದ ತುಳು ನಾಟಕ ಎನ್ನ ತಂಗಡಿ ಪ್ರದರ್ಶನಗೊಳ್ಳಲಿದೆ ಎಂದು ಸಮಿತಿಯ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ ಹಾಗೂ ಕಾರ್ಯಾಧ್ಯಕ್ಷರಾದ ಚಂದಪ್ಪ ಗೌಡ ಬೆರ್ಕೆ, ಲಕ್ಷ್ಮಣ ಗೌಡ ಮೇಗಿನ ಬಜಿಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.