ಬೆಳ್ತಂಗಡಿ: ಬೇಡಿಕೆ ಈಡೇರಿಕೆಗೆ ಶಿಕ್ಷಕರ ಧರಣಿ
Team Udayavani, Apr 26, 2017, 4:01 PM IST
ಬೆಳ್ತಂಗಡಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖೀಲ ಭಾರತ ಮಟ್ಟದಲ್ಲಿ ಶಿಕ್ಷಕರು ಪ್ರತಿಭಟನೆಗೆ ಮುಂದಾಗಿದ್ದು ಇದರ ಅಂಗವಾಗಿ ಎ.25ರಂದು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಂಗಳವಾರ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ನಡೆದ ಧರಣಿ ನಡೆಯಿತು.
ಪ್ರಾಥಮಿಕ ಶಾಲಾ ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲಾರ್ ಅವರು ಮಾತನಾಡಿ, ಹೋರಾಟದ ಮೊದಲ ಹಂತವಾಗಿ ಮಾ.31ರ ಒಳಗೆ ರಾಜ್ಯದ ಎಲ್ಲ ಶಾಸಕರಿಗೆ ಶಿಕ್ಷಕರ ಸಂಘದವರು ಮನವಿ ಅರ್ಪಿಸಿದ್ದಾರೆ. ಇದೀಗ ಎರಡನೆ ಹಂತವಾಗಿದ್ದು ಆ.5ರಂದು ಜಿಲ್ಲಾಮಟ್ಟದಲ್ಲಿ ಸಾಂಕೇತಿಕ ಧರಣಿ ನಡೆಯಲಿದೆ. ಸೆ.5ರಂದು ರಾಜ್ಯಮಟ್ಟದಲ್ಲಿ ಧರಣಿ ನಡೆಯಲಿದ್ದು ಅ.5ರಂದು ಜಂತರ್ ಮಂತರ್ ದಿಲ್ಲಿಯಲ್ಲಿ 50 ಸಾವಿರ ಶಿಕ್ಷಕರು ಸೇರಿ ಪಾರ್ಲಿಮೆಂಟ್ ಚಲೋ ನಡೆಸಲಿದ್ದಾರೆ. ಅ. 6ರಂದು ರಾಷ್ಟ್ರ ಕಾರ್ಯಕಾರಿ ಸಭೆಯನ್ನು ದಿಲ್ಲಿಯ ಶಿಕ್ಷಕ ಭವನದಲ್ಲಿ ನಡೆಸಿ ಹೋರಾಟದ ಮುಂದಿನ ಹಂತ ನಿರ್ಧಾರವಾಗಲಿದೆ ಎಂದರು.
ಬೇಡಿಕೆಗಳು
7ನೇ ವೇತನ ಆಯೋಗದ ಶಿಫಾರಸುಗಳನ್ನು ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು. ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕೆ ತರಗತಿಗೊಬ್ಬ ಶಿಕ್ಷಕ, ಶಾಲೆಗೊಬ್ಬ ಮುಖ್ಯೋಪಾಧ್ಯಾಯರನ್ನು ನೇಮಿಸಬೇಕು ಎಂದು ಒತ್ತಾಯಿಸಲಾಯಿತು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ನಾರಾವಿ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ ಹೆಗ್ಡೆ ಹಟ್ಟಾಜೆಗುತ್ತು, ಧರಣೇಂದ್ರ ಜೈನ್, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ರಘುಪತಿ ಕೆ. ರಾವ್ , ಲಕ್ಷ್ಮಣ ಪೂಜಾರಿ, ಸುರೇಶ್ ಮಾಚಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.